ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಾಲ್ಕು ವರ್ಷಗಳಲ್ಲಿ ಕ್ಷೇತ್ರದ ಚಿತ್ರಣ ಬದಲು

Last Updated 23 ಮೇ 2020, 14:27 IST
ಅಕ್ಷರ ಗಾತ್ರ

ಬೀದರ್: ಮುಂದಿನ ನಾಲ್ಕು ವರ್ಷಗಳ ಅವಧಿಯಲ್ಲಿ ಬೀದರ್ ಲೋಕಸಭಾ ಕ್ಷೇತ್ರದ ಚಿತ್ರಣ ಬದಲಾಗಲಿದೆ. ಜನರ ಜೀವನ ಮಟ್ಟ ಸುಧಾರಣೆ ಜತೆಗೆ ಕ್ಷೇತ್ರ ಎಲ್ಲ ರಂಗಗಳಲ್ಲೂ ಪ್ರಗತಿ ಸಾಧಿಸಲಿದೆ ಎಂದು ಸಂಸದ ಭಗವಂತ ಖೂಬಾ ಹೇಳಿದ್ದಾರೆ.

ಎರಡನೇ ಬಾರಿಗೆ ಸಂಸದನಾಗಿ ಒಂದು ವರ್ಷವಾಗಿದೆ. ಹಿಂದಿನ ಅವಧಿ ಹಾಗೂ ಈಗಿನ ಅವಧಿಯ ಒಂದು ವರ್ಷದಲ್ಲಿ ಜನರ ಆಶೋತ್ತರಗಳಿಗೆ ಸ್ಪಂದಿಸುವ ಕೆಲಸ ಮಾಡಿದ್ದೇನೆ. ಬಡವರು, ರೈತರಿಗೆ ನ್ಯಾಯ ಕೊಡಿಸಲು ಪ್ರಯತ್ನಿಸಿದ್ದೇನೆ ಎಂದು ತಿಳಿಸಿದ್ದಾರೆ.

ಬೀದರ್‌ನಿಂದ ನಾಗರಿಕ ವಿಮಾನಯಾನ ಶುರು ಮಾಡಿಸುವ ಮೂಲಕ ಜಿಲ್ಲೆಯ ಜನರ ಬಹುದಿನಗಳ ಬೇಡಿಕೆಯನ್ನು ಈಡೇರಿಸಿದ್ದೇನೆ. ಇದರಿಂದ ಜಿಲ್ಲೆಯ ಅಭಿವೃದ್ಧಿಯ ವೇಗ ಹೆಚ್ಚಲಿದೆ. ಪ್ರವಾಸೋದ್ಯಮ ಬೆಳವಣಿಗೆಗೂ ಅನುಕೂಲವಾಗಲಿದೆ ಎಂದು ಹೇಳಿದ್ದಾರೆ.

ಬ್ರಿಮ್ಸ್ ಆಸ್ಪತ್ರೆಯಲ್ಲಿನ ಅವ್ಯವಹಾರ ಕೊನೆಗೊಳಿಸಿ ರೋಗಿಗಳಿಗೆ ಉತ್ತಮ ವೈದ್ಯಕೀಯ ಸೇವೆ ಸಿಗುವಂತೆ ಮಾಡಲಾಗಿದೆ. ಎಂ.ಆರ್.ಐ. ಯಂತ್ರ ಆರಂಭವಾಗುವಂತೆ ನೋಡಿಕೊಳ್ಳಲಾಗಿದೆ. ಆಯುಷ್ಮಾನ್ ಭಾರತ ಯೋಜನೆ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಕಬ್ಬು ಬೆಳೆದ ರೈತರಿಗೆ ಉತ್ತಮ ಬೆಲೆ ದೊರಕಿಸಿಕೊಡಲಾಗಿದೆ. ಜಿಲ್ಲೆಯಲ್ಲಿ ಕೈಗಾರಿಕೆಗಳ ಸ್ಥಾಪನೆಗೆ ಒತ್ತು ನೀಡಲಾಗಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರದ ಯೋಜನೆಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸಲು ಶ್ರಮಿಸಲಾಗಿದೆ ಎಂದು ಹೇಳಿದ್ದಾರೆ.

ಕ್ಷೇತ್ರದ ಪ್ರತಿಯೊಬ್ಬ ವ್ಯಕ್ತಿಯ ಅಭಿವೃದ್ಧಿ ನನ್ನ ಗುರಿಯಾಗಿದೆ. ಅದಕ್ಕಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಯೋಜನೆಗಳನ್ನು ತರಲು ಪ್ರಯತ್ನಿಸಲಾಗುವುದು. ಬರುವ ದಿನಗಳಲ್ಲಿ ಕ್ಷೇತ್ರದ ವಿಕಾಸ ಇನ್ನಷ್ಟು ವೇಗವಾಗಿ ಆಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT