ಬೀದರ್: ದೇಶದಲ್ಲಿ ಹೆಚ್ಚುತ್ತಿರುವ ಲವ್ ಜಿಹಾದ್, ಬಲವಂತದ ಮತಾಂತರ, ಹಿಂದೂ ಮಹಿಳೆಯರ ಮೇಲಿನ ಶೋಷಣೆ ಹಾಗೂ ಸಾರ್ವಜನಿಕ ಜಮೀನಿನ ಅತಿಕ್ರಮಣದ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳ ಕಾರ್ಯಕರ್ತರು ನಗರದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು.

ಬಳಿಕ ರಾಷ್ಟ್ರಪತಿ ಹೆಸರಿಗೆ ಬರೆದ ಮನವಿ ಪತ್ರವನ್ನು ಜಿಲ್ಲಾಧಿಕಾರಿಗೆ ಸಲ್ಲಿಸಿದರು.

ಮನವಿಯಲ್ಲಿ ದೇಶದ ವಿವಿಧ ಭಾಗಗಳಲ್ಲಿ ಲವ್ ಜಿಹಾದ್ ಹೆಸರಿನಲ್ಲಿ ಹಿಂದೂ ಯುವತಿಯರ ದೈಹಿಕ ಮತ್ತು ಮಾನಸಿಕ ಶೋಷಣೆ, ಬ್ಲ್ಯಾಕ್ಮೇಲ್, ಬಲವಂತದ ಮತಾಂತರ ಪ್ರಕರಣಗಳು ಹೆಚ್ಚುತ್ತಿರುವುದು ಆತಂಕಕಾರಿ. ಮಹಾರಾಷ್ಟ್ರದ ನಾಸಿಕ್, ರಾಜ್ಯದ ಹುಬ್ಬಳ್ಳಿ, ಕೊಪ್ಪಳ, ಬಾಗಲಕೋಟೆ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ನಡೆದ ಘಟನೆಗಳನ್ನು ವಿಶೇಷ ಪ್ರಕರಣಗಳೆಂದು ಪರಿಗಣಿಸಿ ಎನ್ಐಎ ತನಿಖೆಗೆ ಒಪ್ಪಿಸಬೇಕು ಎಂದು ಆಗ್ರಹಿಸಿದರು.

ಅರಣ್ಯ ಜಮೀನು, ರೈಲು ನಿಲ್ದಾಣ ಹಾಗೂ ಬಸ್ ನಿಲ್ದಾಣಗಳ ಸುತ್ತಮುತ್ತ ನಡೆಯುತ್ತಿರುವ ಭೂ ಅತಿಕ್ರಮಣ ರಾಷ್ಟ್ರದ ಭದ್ರತೆಗೆ ನೇರ ಸವಾಲು. ಕೇಂದ್ರ ಸರ್ಕಾರವು ಲವ್ ಜಿಹಾದ್ ಮತ್ತು ಬಲವಂತದ ಧಾರ್ಮಿಕ ಮತಾಂತರ ತಡೆಗೆ ಕಠಿಣ ಕಾನೂನು ಜಾರಿಗೆ ತರಬೇಕು. ರಾಷ್ಟ್ರವಿರೋಧಿ ಚಟುವಟಿಕೆಗಳಲ್ಲಿ ತೊಡಗುವವರ ವಿರುದ್ಧ ತ್ವರಿತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ವಿಶ್ವ ಹಿಂದೂ ಪರಿಷತ್ ಪ್ರಾಂತ ಕಾರ್ಯಕಾರಿ ಸಮಿತಿ ಸದಸ್ಯ ರಾಮಕೃಷ್ಣ ಸಾಳೆ, ಪ್ರಾಂತ ಸಹ ಸಂಯೋಜಕ ಸತೀಶ್ ನೌಬಾದೆ, ಬೀದರ್ ಜಿಲ್ಲಾಧ್ಯಕ್ಷ ವೀರಶೆಟ್ಟಿ ಖ್ಯಾಮಾ, ಜಿಲ್ಲಾ ಕಾರ್ಯದರ್ಶಿ ಬಸವರಾಜ ಯದಲಾಪೂರೆ, ಬಜರಂಗದಳ ಜಿಲ್ಲಾ ಸಂಯೋಜಕ ಭೀಮಣ್ಣ ಸುರೋಳಿ, ರೋಹಿತ್ ಗುರೂಜಿ, ರವಿ ನೌದಗಿ, ಶ್ರೀಶೈಲ ವತಾಡೆ, ಸೋಮಶೇಖರ ಪಾಟೀಲ್, ಶಶಿಧರ ಹೊಸಳ್ಳಿ, ಶಶಿ ಪಾಟೀಲ್ ಚೌಳಿ, ಸಾಗರ್ ಪಾಠಕ್, ಆಕಾಶ ಕೊಡಗೆ, ಅಭಿನಯ, ಶಂಕರ್ ಖ್ಯಾಮಾ, ಸಂಜು, ಬೀರಪ್ಪ ಹಿಪ್ಪಳಗಾಂವ್, ಬಸವರಾಜ ಮಾನುರೆ, ಗುಂಡು ಬಿರಾದಾರ ಮತ್ತಿತರರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260429-33-1718800439

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.