ಬೀದರ್: ‘ರಾಜ್ಯದಲ್ಲಿ ಹೊಸದಾಗಿ ಅಸ್ತಿತ್ವಕ್ಕೆ ಬರಲಿರುವ ನೂತನ ಸಂಪುಟದಲ್ಲಿ ಮಾದಿಗ ಸಮುದಾಯದ ಶಾಸಕರಿಗೆ ಉಪಮುಖ್ಯಮಂತ್ರಿ ಸ್ಥಾನ ಕೊಟ್ಟು, ರಾಜಕೀಯ ಪ್ರಾತಿನಿಧ್ಯ ನೀಡಬೇಕು’ ಎಂದು ಮಾದಿಗ ಸಮಾಜದ ಹಿರಿಯ ಮುಖಂಡರೂ ಆದ ಕಾಂಗ್ರೆಸ್ ಮುಖಂಡ ಚಂದ್ರಕಾಂತ ಹಿಪ್ಪಳಗಾಂವ್ ಆಗ್ರಹಿಸಿದ್ದಾರೆ.

ದೇಶಕ್ಕೆ ಸ್ವಾತಂತ್ರ್ಯ ಬಂದ ನಂತರ ಇದುವರೆಗೆ ಮಾದಿಗ ಸಮುದಾಯವು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುತ್ತ ಬಂದಿದೆ. ಆದಕಾರಣ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ರಚನೆಯಾಗಲಿರುವ ಹೊಸ ಸರ್ಕಾರದಲ್ಲಿ ಮಾದಿಗ ಸಮುದಾಯದ ಕನಿಷ್ಠ ನಾಲ್ವರಿಗೆ ಸಚಿವ ಸ್ಥಾನ ನೀಡಬೇಕು. ಕೆ.ಎಚ್. ಮುನಿಯಪ್ಪ ಅಥವಾ ಆರ್.ಬಿ. ತಿಮ್ಮಾಪುರ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕೆಂದು ನಗರದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಒತ್ತಾಯಿಸಿದರು.

ಸಿದ್ಧರಾಮಯ್ಯ ನೇತೃತ್ವದ ಸರ್ಕಾರದಲ್ಲಿ ಸಮಾಜದಿಂದ ಇಬ್ಬರಿಗೆ ಸಚಿವಗಿರಿ ಸಿಕ್ಕಿತ್ತು. ರಾಜ್ಯದಲ್ಲಿ ಮಾದಿಗ ಸಮುದಾಯ ದೊಡ್ಡ ಸಂಖ್ಯೆಯಲ್ಲಿರುವ ಕಾರಣ ಹೊಸ ಸಚಿವ ಸಂಪುಟದಲ್ಲಿ ಕನಿಷ್ಠ ನಾಲ್ವರಿಗೆ ಸಚಿವ ಸ್ಥಾನ, ಇಬ್ಬರಿಗೆ ಎಮ್ಎಲ್ಸಿ ಹಾಗೂ ಎಚ್. ಆಂಜನೇಯ ಅವರಿಗೂ ಸಚಿವ ಸ್ಥಾನ ನೀಡಬೇಕೆಂದು ಆಗ್ರಹಿಸಿದರು.

ಕರ್ನಾಟಕ ರಾಜ್ಯ ಆದಿ ಜಾಂಬವ ಸಂಘದ ಜಿಲ್ಲಾಧ್ಯಕ್ಷ ಝಾಪಟರಾಜ ಕಡ್ಯಾಳ ಮಾತನಾಡಿ, ಮಾದಿಗ ಸಮುದಾಯವು ಯಾವತ್ತೂ ಕಾಂಗ್ರೆಸ್ ಪಕ್ಷಕ್ಕೆ ನಿಷ್ಠೆ ತೋರುತ್ತ ಬಂದಿದೆ. ಆದರೂ ಹಿಂದಿನ ಸಿದ್ಧರಾಮಯ್ಯ ಅವಧಿಯಲ್ಲಿ ಇಬ್ಬರಿಗೆ ಮಂತ್ರಿಗಿರಿ ನೀಡಲಾಗಿತ್ತು. ಡಿ.ಕೆ. ಶಿವಕುಮಾರ್ ಅವರ ಮಂತ್ರಿ ಮಂಡಲದಲ್ಲಿ ನಾಲ್ವರಿಗೆ ಸಚಿವ ಸ್ಥಾನ, ಉತ್ತರ ಕರ್ನಾಟಕದ ಹಿರಿಯ ಮುತ್ಸದ್ದಿ ರಾಜಕಾರಣಿ ಆರ್.ಬಿ ತಿಮ್ಮಾಪುರಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡಬೇಕೆಂದು ಒತ್ತಾಯಿಸಿದರು.

ಮಾದಿಗ ಸಮುದಾಯದ ಮುಖಂಡರಾದ ಸೂರ್ಯಕಾಂತ ದಂಡಿನ್, ಹಣಮಂತ ಸೂರ್ಯವಂಶಿ, ಕಮಲಾಕರ ಹೆಗಡೆ, ಪ್ರದೀಪ ಹೆಗಡೆ, ಜೀವನ ರಿಕ್ಕೆ, ಸುಂದರರಾಜ ಮುದಾಳೆ, ತುಳಸಿರಾಮ, ಅಂಬಾದಾಸ, ಶಾಮ ಕಾಂಬಳೆ, ದೀಪಕ ರಿಕ್ಕೆ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260530-33-1574909979

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.