ಮಾಳೆಗಾಂವ್(ಜನವಾಡ): ಪಡಿತರ ಚೀಟಿ-ಮನೆ ಕೊಡಿಸಿ, ಹೊಲಕ್ಕೆ ದಾರಿ ಮಾಡಿಕೊಡಿ, ಸಂಪರ್ಕ ರಸ್ತೆ ನಿರ್ಮಿಸಿ, ವಿದ್ಯುತ್ ಕಂಬ ಸ್ಥಳಾಂತರಿಸಿ, ನೀರಿನ ಸಮಸ್ಯೆ ಪರಿಹರಿಸಿ, ವಸತಿ ಶಾಲೆ, ಪದವಿಪೂರ್ವ ಕಾಲೇಜು, ಪೊಲೀಸ್ ಠಾಣೆ ಮಂಜೂರು ಮಾಡಿಸಿ...

ಬೀದರ್ ತಾಲ್ಲೂಕಿನ ಮಾಳೆಗಾಂವ್ನಲ್ಲಿ ಮಂಗಳವಾರ ನಡೆದ ತಾಲ್ಲೂಕುಮಟ್ಟದ ಜನಸ್ಪಂದನ ಸಭೆಯಲ್ಲಿ ಪೌರಾಡಳಿತ ಹಾಗೂ ಹಜ್ ಸಚಿವ ರಹೀಂಖಾನ್ ಎದುರು ಜನ ಹೀಗೆ ಬೇಡಿಕೆಗಳ ಪಟ್ಟಿಯನ್ನೇ ಇಟ್ಟರು.

ಮಾಳೆಗಾಂವ್ ಗ್ರಾಮದ ಬಕ್ಕಪ್ಪ ದಂಡಿನ್ ಹಾಗೂ ಇತರರು ಮಾಳೆಗಾಂವ್ನಲ್ಲಿ ಏಕೈಕ ಕೊಳವೆಬಾವಿ ಇರುವ ಕಾರಣ ನೀರಿಗೆ ಸಮಸ್ಯೆಯಾಗುತ್ತಿದೆ. ಗ್ರಾಮಕ್ಕೆ ಪದವಿಪೂರ್ವ ಕಾಲೇಜು ಮಂಜೂರಾದರೂ, ಆರಂಭವಾಗಿಲ್ಲ ಎಂದು ಗಮನ ಸೆಳೆದರು. ಗ್ರಾಮಕ್ಕೆ ವಸತಿ ಶಾಲೆ ಮಂಜೂರು ಮಾಡಬೇಕು ಎಂದು ಬೇಡಿಕೆ ಮಂಡಿಸಿದರು. ಇವರೊಂದಿಗೆ, ಚಿಮಕೋಡ್ನ ಸಂಜುಕುಮಾರ ಸಾಗರ್ ಅವರು ಪೊಲೀಸ್ ಠಾಣೆ ಮಂಜೂರು ಮಾಡಬೇಕು ಎಂದು ಒತ್ತಾಯಿಸಿದರು.

ಇದಕ್ಕೆ ಸ್ಪಂದಿಸಿದ ಸಚಿವರು, ಗ್ರಾಮದಲ್ಲಿ ಬುಧವಾರವೇ ಎರಡು ಹೊಸ ಕೊಳವೆಬಾವಿಗಳನ್ನು ಕೊರೆಸಲಾಗುವುದು. ಪದವಿಪೂರ್ವ ಕಾಲೇಜು ಆರಂಭಿಸುವ ಸಂಬಂಧ ಶಿಕ್ಷಣ ಸಚಿವರೊಂದಿಗೆ ಚರ್ಚಿಸಲಾಗುವುದು. ಪೊಲೀಸ್ ಠಾಣೆ ಸ್ಥಾಪನೆಗೆ ಗೃಹ ಇಲಾಖೆಗೆ ಶಿಫಾರಸು ಮಾಡಲಾಗುವುದು. ಮಾಳೆಗಾಂವ್ನಲ್ಲಿ ₹5 ಕೋಟಿ ವೆಚ್ಚದಲ್ಲಿ ಪಿಎಚ್ಸಿ ಕಟ್ಟಡ ನಿರ್ಮಾಣ ಕಾಮಗಾರಿ ಎರಡು ತಿಂಗಳಲ್ಲಿ ಆರಂಭವಾಗಲಿದೆ ಎಂದು ತಿಳಿಸಿದರು.

ಅಷ್ಟೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಸಂಗಶೆಟ್ಟಿ ರಾಮತೀರ್ಥ ಅವರು, ವಿಬಿ-ಜಿ ರಾಮ್ಜಿ ಯೋಜನೆ ಅನುಷ್ಠಾನಗೊಂಡಿಲ್ಲ. ಉದ್ಯೋಗ ಖಾತ್ರಿ ಕೆಲಸ ಕೊಡುವುದೂ ನಿಂತಿದೆ. ಆನ್ಲೈನ್ ಮುಟೇಷನ್ ಆಗುತ್ತಿಲ್ಲ. 15ನೇ ಹಣಕಾಸು ನಿಧಿಯ ಅನುದಾನ ಬಿಡುಗಡೆಯಾಗಿಲ್ಲ. ನಿರ್ವಹಣೆ ಕಾರ್ಯಗಳಿಗೆ ತೊಂದರೆಯಾಗುತ್ತಿದೆ ಎಂದು ಹೇಳಿದರು.

ಸಚಿವರು ಆನ್ಲೈನ್ ಮುಟೇಷನ್ ಸಮಸ್ಯೆ ಕುರಿತು ಸ್ಥಳದಲ್ಲೇ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರೊಂದಿಗೆ ಮೊಬೈಲ್ನಲ್ಲಿ ಮಾತನಾಡಿದರು. ಅಗತ್ಯ ದಾಖಲೆ ಸಲ್ಲಿಸಿದರೆ ಮುಟೇಷನ್ಗಳು ಆಗುತ್ತಿವೆ ಎಂದು ಅವರು ತಿಳಿಸಿದರು.

ಜಾಂಪಾಡದ ಶಾಂತಮ್ಮ ಅವರು, ಗ್ರಾಮದಲ್ಲಿ ನೀರಿನ ಸಮಸ್ಯೆ ಇದೆ. ರಸ್ತೆ ಬೇಡಿಕೆಯೂ ಈಡೇರಿಲ್ಲ ಎಂದು ಹೇಳಿದರು. ನಾಳೆಯೇ ಗ್ರಾಮಕ್ಕೆ ಭೇಟಿ ಕೊಟ್ಟು ಸಮಸ್ಯೆ ಪರಿಹಾರಕ್ಕೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ಪಿಡಿಒಗೆ ಸೂಚನೆ ನೀಡಿದರು. ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಗಿರೀಶ್ ಬದೋಲೆ, ಉಪ ಕಾರ್ಯದರ್ಶಿ ಶರಣಬಸಪ್ಪ ಕೋಟಪ್ಪಗೋಳ್, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಚಂದ್ರಕಾಂತ ಪೂಜಾರಿ, ಬೀದರ್ ಉಪ ವಿಭಾಗಾಧಿಕಾರಿ ಮುಹಮ್ಮದ್ ಶಕೀಲ್, ತಹಶೀಲ್ದಾರ್ ರವೀಂದ್ರ ದಾಮಾ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260429-33-870994152

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.