ಹೊಸ ಸೇತುವೆ ನಿರ್ಮಾಣಕ್ಕೆ ಪ್ರಸ್ತಾವ ಸಲ್ಲಿಕೆ
ಕಾರಂಜಾ ನದಿಗೆ ಅಡ್ಡಲಾಗಿ ನಿರ್ಮಿಸಿರುವ ದಾಡಗಿ ಸೇತುವೆ ಬಳಿ ಹೊಸ ಸೇತುವೆ ನಿರ್ಮಾಣಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅವರು ಮುಖ್ಯಮಂತ್ರಿ ಹಾಗೂ ಲೋಕೋಪಯೋಗಿ ಇಲಾಖೆಯ ಸಚಿವರಿಗೆ ಮನವಿ ಮಾಡಿದ್ದಾರೆ. ‘ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲಾಗಿದೆ. ಅನುಮೋದನೆ ಸಿಕ್ಕ ನಂತರ ಸೇತುವೆ ನಿರ್ಮಾಣದ ಕೆಲಸ ಆರಂಭಿಸಲಾಗುವುದು. ತಾತ್ಕಾಲಿಕವಾಗಿ ಸೇತುವೆ ಅಕ್ಕಪಕ್ಕದ ಗಾರ್ಡ್ ಸ್ಟೋನ್‌ಗಳ ಎತ್ತರ ಹೆಚ್ಚಿಸಲು ಈಗಾಗಲೇ ಸೂಚಿಸಲಾಗಿದೆ. ಮಳೆಯ ಕಾರಣದಿಂದ ಕೆಲಸ ವಿಳಂಬವಾಗಿದ್ದು ಒಂದು ವಾರದಲ್ಲಿ ಗಾರ್ಡ್ ಸ್ಟೋನ್‌ಗಳ ಎತ್ತರ ಹೆಚ್ಚಳ ಕಾರ್ಯ ಪೂರ್ಣಗೊಳಿಸಲಾಗುವುದು. ಲಖನಗಾಂವ್ ಬ್ರಿಜ್ ಕಂ ಬ್ಯಾರೇಜ್ ಪಕ್ಕದಲ್ಲಿ ಇನ್ನೊಂದು ಹೊಸ ಸೇತುವೆ ನಿರ್ಮಾಣಕ್ಕೆ ಪ್ರಸ್ತಾವ ಸಲ್ಲಿಸಲಾಗಿದೆ’ ಎಂದು ಲೋಕೋಪಯೋಗಿ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಅಲ್ತಾಫ್ ಮಿಯಾ ‘ಪ್ರಜಾವಾಣಿ’ ಗೆ ತಿಳಿಸಿದರು.