ಬೀದರ್: ಸಕಲ ಮರಾಠ ಸಮಾಜದ ವತಿಯಿಂದ ಏ.24ರಂದು ನಗರದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಜಯಂತಿ ಆಚರಿಸಲು ತೀರ್ಮಾನಿಸಲಾಗಿದೆ.

ದಾದಾ ಮಹಾರಾಜ ನಗರಕರ ಅಧ್ಯಕ್ಷತೆಯಲ್ಲಿ ನಗರದಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರಕ್ಕೆ ಬರಲಾಗಿದೆ.

ಕಾರ್ಯಕ್ರಮದ ಉದ್ಘಾಟನೆಗೆ ಕಾರ್ಮಿಕ ಸಚಿವ ಸಂತೋಷ್ ಲಾಡ್ ಆಗಮಿಸಲಿದ್ದಾರೆ. ಮುಖ್ಯ ವಕ್ತಾರರಾಗಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ವಂಶಸ್ಥ ಪ್ರಕಾಶ ಅಂಬೇಡ್ಕರ್ ಭಾಗವಹಿಸಲಿದ್ದಾರೆ. ಏ.24ರಂದು ಸಂಜೆ 5ಕ್ಕೆ ಕಾರ್ಯಕ್ರಮ ಜರುಗಲಿದೆ ಎಂದು ಪ್ರಕಟಣೆ ಕೋರಿದೆ.

ಸಭೆಯಲ್ಲಿ ಮುಖಂಡರಾದ ನಾರಾಯಣ ಗಣೇಶ, ಸಂದೀಪ್ ಪಾಟೀಲ, ರಂಜಿತ್ ಪಾಟೀಲ, ಗೋವಿಂದರಾವ ಜಾಧವ, ಅಮರ, ಅನಿಲ ಮತ್ತಿತರರು ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260419-33-1410334007

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.