ಬೀದರ್: ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ. ಖಂಡ್ರೆ ಅವರು ಏ.19ರಿಂದ 22ರ ವರೆಗೆ ಬೀದರ್ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳುವರು.

ಏ.19ರಂದು ಮಧ್ಯಾಹ್ನ 1ಕ್ಕೆ ಬೀದರ್ಗೆ ಆಗಮಿಸುವರು. ಮಧ್ಯಾಹ್ನ 3.30ರ ವರೆಗೆ ಬೀದರ್ನಲ್ಲಿ ಸ್ಥಳೀಯ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಏ.20ರಂದು ಬೆಳಿಗ್ಗೆ 8.30ಕ್ಕೆ ಕೆ.ಪಿ.ಟಿ.ಸಿ.ಎಲ್. ಮತ್ತು ಎಸ್ಕಾಂಗಳ ವೀರಶೈವ ಲಿಂಗಾಯತ ವೇದಿಕೆ ವತಿಯಿಂದ ಆಯೋಜಿಸಿರುವ ಬಸವ ಜಯಂತಿ, ಬೆಳಿಗ್ಗೆ 11ಕ್ಕೆ ಬೀದರ್ ಜಿಲ್ಲಾಡಳಿತದ ವತಿಯಿಂದ ಚನ್ನಬಸವ ಪಟ್ಟದ್ದೇವರು ರಂಗಮಂದಿರದಲ್ಲಿ ಆಯೋಜಿಸಿರುವ ಬಸವ ಜಯಂತಿ ಉತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಮಧ್ಯಾಹ್ನ 1 ರಿಂದ 6ರ ವರೆಗೆ ಬೀದರ್ ಸ್ಥಳೀಯ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಸಂಜೆ 6ಕ್ಕೆ ಬೀದರ್ನಿಂದ ರಸ್ತೆ ಮೂಲಕ ಭಾಲ್ಕಿಗೆ ಪ್ರಯಾಣಿಸಿ ವಾಸ್ತವ್ಯ ಹೂಡಲಿದ್ದಾರೆ.

ಏ.21ರಂದು ಬೆಳಿಗ್ಗೆ 9 ರಿಂದ ಸಂಜೆ 6ರ ವರೆಗೆ ಭಾಲ್ಕಿಯ ಸ್ಥಳೀಯ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಅಲ್ಲಿಯೇ ವಾಸ್ತವ್ಯ ಹೂಡಲಿದ್ದಾರೆ. ಏ.22ರಂದು ಬೆಳಿಗ್ಗೆ 11ಕ್ಕೆ ಭಾಲ್ಕಿಯ ಚನ್ನಬಸವಾಶ್ರಮದಲ್ಲಿ ನಡೆಯಲಿರುವ ವಚನ ಜಾತ್ರೆ, ಚನ್ನಬಸವ ಪಟ್ಟದೇವರ ಸ್ಮರಣೋತ್ಸವ ಹಾಗೂ ಬಸವಲಿಂಗ ಪಟ್ಟದೇವರ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಸಂಜೆ 6ರ ವರೆಗೆ ಭಾಲ್ಕಿಯ ಸ್ಥಳೀಯ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ ಎಂದು ಸಚಿವರ ಆಪ್ತ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260419-33-467156683

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.