ಬೀದರ್: ಕಮಲನಗರ ತಾಲ್ಲೂಕಿನ ಬೆಳಕುಣಿ ಗ್ರಾಮದ ದಲಿತ ಸಮುದಾಯದ ಅಪ್ರಾಪ್ತೆಯ ಅತ್ಯಾಚಾರ, ಕೊಲೆ ಪ್ರಕರಣವನ್ನು ರಾಜಿ ಸಂಧಾನದ ಮೂಲಕ ಕೊನೆಗೊಳಿಸಲು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ ಪ್ರಯತ್ನಿಸುತ್ತಿದ್ದಾರೆ. ಆದರೆ, ಇದು ಸರಿಯಾದ ಕ್ರಮವಲ್ಲ ಎಂದು ಜನರ ಧ್ವನಿ ಸಂಘಟನೆಯ ಸಂಸ್ಥಾಪಕ ಅಧ್ಯಕ್ಷ ಅಂಕುಶ್ ಗೋಖಲೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದರು.

ಕೊಲೆ ಆರೋಪಿ ಲಖನ್ ಪವಾರ್ನ ತಂದೆ ಬಾಬುರಾವ್ ಪವಾರ್ ಹಾಗೂ ಬಾಲಕಿಯ ಪೋಷಕರನ್ನು ಎಸ್ಪಿಯವರು ತಮ್ಮ ಕಚೇರಿಗೆ ಕರೆಸಿಕೊಂಡು, ರಾಜಿ ಮಾಡಿಸಲು ಪ್ರಯತ್ನಿಸಿದ್ದಾರೆ. ಈ ಕುರಿತು ಕೆಲ ಸಂಘಟನೆಗಳ ಮುಖಂಡರು ಪ್ರಶ್ನಿಸಿದರೆ, ಅಂಥವರಿಗೆ ಪೊಲೀಸರು ನೋಟಿಸ್ ಕೊಟ್ಟಿದ್ದಾರೆ. ಕೊಲೆ ಆರೋಪಿಯನ್ನು ಜತೆಗಿಟ್ಟುಕೊಂಡು ರಾಜಿ ಸಂಧಾನ ಮಾಡುವುದು ಸರಿಯೇ? ಇದರ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವರೇ ಉತ್ತರಿಸಬೇಕು ಎಂದು ನಗರದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಆಗ್ರಹಿಸಿದರು.

ಘಟನೆಯ ಬಳಿಕ ಪೊಲೀಸರು ಎಫ್ಐಆರ್ನಲ್ಲಿ ಆತ್ಮಹತ್ಯೆ ಎಂದು ಮಾಡಿದ್ದಾರೆ. ಸಂಘಟನೆಗಳು ಮನವಿ ಕೊಟ್ಟ ನಂತರ ಆತ್ಮಹತ್ಯೆಗೆ ಪ್ರಚೋದನೆ ಎಂಬುದಾಗಿ ಮಾಡಿದ್ದಾರೆ. ಸ್ವಜಾತಿಯವನು ಎಂಬ ಕಾರಣಕ್ಕಾಗಿ ಕ್ಷೇತ್ರದ ಶಾಸಕ ಪ್ರಭು ಚವಾಣ್ ಆರೋಪಿ ರಕ್ಷಣೆಗೆ ನಿಂತಿದ್ದಾರೆ. ಕುಸ್ತಿ ತರಬೇತಿ ಹಾಗೂ ಸಾಲ ವಸೂಲಾತಿ ಹೆಸರಿನಲ್ಲಿ ಲಖನ್ ಎಂಬಾತ ಬಾಲಕಿಯನ್ನು ಅಪಹರಿಸಿ, ಲೈಂಗಿಕ ದೌರ್ಜನ್ಯ ನಡೆಸಿ, ಕಿರುಕುಳ ಕೊಟ್ಟು ಕೊಲೆ ಮಾಡಿದ್ದಾನೆ. ಈ ಘಟನೆಯನ್ನು ಉಸ್ತುವಾರಿ ಸಚಿವ ಈಶ್ವರ ಬಿ. ಖಂಡ್ರೆ ಅವರು ಗಂಭೀರವಾಗಿ ತೆಗೆದುಕೊಳ್ಳಬೇಕು. ಇದರ ತನಿಖೆಯನ್ನು ಎಸ್ಐಟಿಯಿಂದ ಮಾಡಿಸಬೇಕು ಎಂದು ಒತ್ತಾಯಿಸಿದರು.

ಮುಖಂಡ ದಿಲೀಪ್ಕುಮಾರ್ ವರ್ಮಾ ಮಾತನಾಡಿ, ಆರೋಪಿಯ ಎನ್ಕೌಂಟರ್ ಮಾಡಬೇಕು. ನೊಂದ ಕುಟುಂಬಕ್ಕೆ ನ್ಯಾಯ ಒದಗಿಸಬೇಕು ಎಂದು ಹೇಳಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260515-33-1194680559

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.