ಜಮಖಂಡಿ: ಬೀದರ್ ಜಿಲ್ಲೆಯ ಕಮಲನಗರ ತಾಲ್ಲೂಕಿನಲ್ಲಿ ದಲಿತ ಸಮುದಾಯದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿರುವ ಆರೋಪಿಯ ವಿರುದ್ಧ ಪೋಕ್ಸೊ, ಅಪಹರಣ ಮತ್ತು ಕೊಲೆ ಪ್ರಕರಣಗಳನ್ನು ತಕ್ಷಣ ದಾಖಲಿಸುವಂತೆ ಆಗ್ರಹಿಸಿ ಮಂಗಳವಾರ ತಾಲ್ಲೂಕು ಆಡಳಿತ ಸೌಧದ ಮುಂದೆ ಕರ್ನಾಟಕ ಭೀಮ ಸೇನೆಯ ಪದಾಧಿಕಾರಿಗಳು ಉಪತಹಶೀಲ್ದಾರ್ಗೆ ಮನವಿ ಸಲ್ಲಿಸಿದರು.

ಔರಾದ್ ತಾಲ್ಲೂಕಿನ ವ್ಯಕ್ತಿಯು, ಬಾಲಕಿಗೆ ಕಬಡ್ಡಿ ಮತ್ತು ಕುಸ್ತಿ ತರಬೇತಿ ನೀಡುತ್ತೇನೆ ಎಂದು ಪಾಲಕರಿಗೆ ಪುಸಲಾಯಿಸಿ ಸುಮಾರು 2 ವರ್ಷಗಳ ಕಾಲ ಜೀತದಾಳಾಗಿ ದುಡಿಸಿಕೊಂಡಿದ್ದಾರೆ. ನಂತರ ಕ್ರೀಡಾ ತರಬೇತಿಯ ವೆಚ್ಚ ಎಂದು ಹೇಳಿ ₹ 60 ಸಾವಿರ ಹಣ ಪಡೆದಿದ್ದಾರೆ. ಅಲ್ಲದೆ ಬಾಲಕಿಯ ಜೊತೆ ಅಸಭ್ಯವಾಗಿ ವರ್ತಿಸುತ್ತಿದ್ದ’ ಎಂದು ಆರೋಪಿಸಿದರು.

ಸರ್ಕಾರ ಕೂಡಲೇ ಕ್ರಮ ಕೈಗೊಳ್ಳಬೇಕು, ಎಸ್ ಐ ಟಿ ರಚನೆ ಮಾಡಿ ಎಂದು ಮನವಿ ಪತ್ರದಲ್ಲಿ ತಿಳಿಸಿದ್ದಾರೆ.

ಸೇನೆಯ ಜಿಲ್ಲಾ ಘಟಕದ ಅಧ್ಯಕ್ಷ ಪ್ರವೀಣ ಹೊಳೆಪ್ಪಗೋಳ, ಲಿಂಗರಾಜ ಬೆಳ್ಳನ್ನವರ, ಪೂಜಾ ಕಾಂಬಳೆ, ರಾಜು ಲಗಳಿ, ನಾರಾಯಣ ಕಾಂಬಳೆ, ರವಿ ಆಲಗೂರ, ಬಾಳು ಪವಾರ, ಬಸವರಾಜ ಬೆಳ್ಳುಬ್ಬಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260521-19-1979894790

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.