ಬೀದರ್: ನಗರದ ಅಲ್ಪಸಂಖ್ಯಾತರ ಮಹಿಳಾ ಪದವಿಪೂರ್ವ ಕಾಲೇಜು ಕಟ್ಟಡಕ್ಕೆ ಶುಕ್ರವಾರ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಹಾಗೂ ಪೌರಾಡಳಿತ ಮತ್ತು ಹಜ್ ಸಚಿವ ರಹೀಂಖಾನ್ ಜಂಟಿಯಾಗಿ ಶಂಕುಸ್ಥಾಪನೆ ನೆರವೇರಿಸಿದರು.

ಸಚಿವ ಈಶ್ವರ ಖಂಡ್ರೆ ಮಾತನಾಡಿ, ‘ರಾಜ್ಯ ಸರ್ಕಾರ ಅಲ್ಪಸಂಖ್ಯಾತರು, ಹಿಂದುಳಿದ ವರ್ಗದವರ ಶೈಕ್ಷಣಿಕ, ಸಾಮಾಜಿಕ ಹಾಗೂ ಆರ್ಥಿಕ ಅಭಿವೃದ್ಧಿಗೆ ಅವಿರತ ಶ್ರಮಿಸುತ್ತಿದೆ. ಕಾಲೇಜಿನಿಂದ ಅಲ್ಪಸಂಖ್ಯಾತರ ವಿದ್ಯಾರ್ಥಿನಿಯರಿಗೆ ಅನುಕೂಲವಾಗಲಿದೆ’ ಎಂದರು.

ಪೌರಾಡಳಿತ ಮತ್ತು ಹಜ್ ಸಚಿವ ರಹೀಂಖಾನ್ ಮಾತನಾಡಿ, ‘ಅಲ್ಪಸಂಖ್ಯಾತ ವಿದ್ಯಾರ್ಥಿನಿಯರಿಗೆ ಗುಣಮಟ್ಟದ ಶಿಕ್ಷಣ ಒದಗಿಸಲು ₹4.96 ಕೋಟಿ ವೆಚ್ಚದಲ್ಲಿ ಪದವಿಪೂರ್ವ ಕಾಲೇಜು ಕಟ್ಟಡ ನಿರ್ಮಿಸಲಾಗುತ್ತಿದೆ. ಕಾಲೇಜು ಜಿಲ್ಲೆಯ ಶೈಕ್ಷಣಿಕ ಅಭಿವೃದ್ಧಿಗೆ ತನ್ನದೇ ಆದ ಕೊಡುಗೆ ನೀಡಲಿದೆ’ ಎಂದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗಿರೀಶ್ ಬದೋಲೆ, ಮುಖಂಡ ಮುಹಮ್ಮದ್ ಗೌಸ್, ಶಾಹೀನ್ ಶಿಕ್ಷಣ ಸಂಸ್ಥೆಗಳ ಸಮೂಹದ ಅಧ್ಯಕ್ಷ ಅಬ್ದುಲ್ ಖದೀರ್, ಮನ್ದೀಪ್ ಕೌರ್, ಮನ್ಸೂರ್ ಅಹಮ್ಮದ್ ಖಾದ್ರಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260518-33-951506867

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.