ಬೀದರ್: ಜಿಲ್ಲೆಯ ಹುಮನಾಬಾದ್ ತಾಲ್ಲೂಕು ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರಿಗೆ ಗಂಭೀರ ಸ್ವರೂಪದ ಗಾಯಗಳಾಗಿರುವ ಬಗ್ಗೆ ಆಘಾತ ವ್ಯಕ್ತಪಡಿಸಿರುವ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ. ಖಂಡ್ರೆ, ತನಿಖೆಗೆ ಆದೇಶ ನೀಡಿದ್ದಾರೆ.

ಕೂಡಲೇ ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ಕೊಡಿಸಲು ಮತ್ತು ಚಿಕಿತ್ಸಾವೆಚ್ಚ ಭರಿಸಲು ಜಿಲ್ಲಾಡಳಿತಕ್ಕೆ ಸೂಚಿಸಿರುವ ಅವರು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮತ್ತು ಸ್ಫೋಟಕ ಪರೀಕ್ಷಾ ತಜ್ಞರನ್ನು ಸ್ಥಳಕ್ಕೆ ಕಳುಹಿಸಿ ಸ್ಫೋಟ ಸ್ಥಳದಲ್ಲಿ ಮಾದರಿ ಸಂಗ್ರಹಿಸಿ ತನಿಖೆ ಮಾಡಲು ಆದೇಶಿಸಿದ್ದಾರೆ.

ಸ್ಫೋಟಕ್ಕೆ ಕಾರಣವೇನು, ಸ್ಫೋಟಕ್ಕೆ ಬಳಕೆಯಾಗಿರುವ ವಸ್ತು ಯಾವುದು, ಆ ಸ್ಫೋಟಕ ವಸ್ತು ಅಲ್ಲಿಗೆ ಹೇಗೆ ಬಂತು, ಯಾವ ಉದ್ದೇಶಕ್ಕೆ ಅದು ಬಳಕೆಯಾಗುತ್ತಿದ್ದು ಎಂಬ ಬಗ್ಗೆ ಸಮಗ್ರ ತನಿಖೆ ನಡೆಸಿ, ಸ್ಫೋಟಕ್ಕೆ ಕಾರಣರಾದವರ ವಿರುದ್ಧ ಕಾನೂನು ರೀತ್ಯ ಕಠಿಣ ಕ್ರಮ ಕೈಗೊಳ್ಳಲು ಈಶ್ವರ ಖಂಡ್ರೆ ಸೂಚಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.