ಶುಕ್ರವಾರ, ಜುಲೈ 30, 2021
28 °C

ಪ್ರಧಾನಮಂತ್ರಿ ಆವಾಸ್ ಯೋಜನೆ ಪ್ರಯೋಜನಕ್ಕೆ ಮನವಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೀದರ್: ಜಿಲ್ಲೆಯ ಬಡ ಹಾಗೂ ಮಧ್ಯಮ ವರ್ಗದ ಜನ ಪ್ರಧಾನಮಂತ್ರಿ ಆವಾಸ್ ಯೋಜನೆಯ ಪ್ರಯೋಜನ ಪಡೆಯಬೇಕು ಎಂದು ಸಂಸದ ಭಗವಂತ ಖೂಬಾ ಮನವಿ ಮಾಡಿದ್ದಾರೆ.

ದೇಶದಲ್ಲಿ ಎಲ್ಲರೂ ಸೂರು ಹೊಂದಬೇಕು ಎನ್ನುವ ಆಶಯದೊಂದಿಗೆ ಮೋದಿ ಅವರು ಪ್ರಧಾನಮಂತ್ರಿ ಆವಾಸ್ ಯೋಜನೆ ಜಾರಿಗೊಳಿಸಿದ್ದಾರೆ. ಯೋಜನೆಯಡಿ ಜಿಲ್ಲೆಯಲ್ಲಿ ಈವರೆಗೆ 18,202 ಜನ ಮನೆ ನಿರ್ಮಿಸಿಕೊಂಡಿದ್ದಾರೆ ಎಂದು ಹೇಳಿದ್ದಾರೆ.

ಬಡವರು ಹಾಗೂ ಮಧ್ಯಮ ವರ್ಗದವರು ಯೋಜನೆಯಡಿ ಸಾಲ ಪಡೆದು ಮನೆ ನಿರ್ಮಿಸಿಕೊಳ್ಳಬಹುದು ಇಲ್ಲವೇ ಕೊಂಡುಕೊಳ್ಳಬಹುದು. ಯೋಜನೆಯಡಿ ಸರ್ಕಾರ ಸಬ್ಸಿಡಿ ಒದಗಿಸಲಿದೆ. ಅರ್ಹರು ತಮ್ಮ ಹತ್ತಿರದ ಬ್ಯಾಂಕ್‍ಗಳಲ್ಲಿ ಅರ್ಜಿ ಪಡೆದು, ಅಗತ್ಯ ದಾಖಲೆಗಳನ್ನು ಸಲ್ಲಿಸಿ, ಸಾಲ ಪಡೆದುಕೊಳ್ಳಬಹುದು ಎಂದು ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು