ಗುರುವಾರ , ಮೇ 26, 2022
29 °C
ಪಾದರಾಯನಪುರ ದಾಂದಲೆ ಪ್ರಕರಣ

ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕೈಕೊಳ್ಳಲು ಖೂಬಾ ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೀದರ್‌: ‘ಪಾದರಾಯನಪುರ ದಾಂದಲೆ ಪ್ರಕರಣಕ್ಕೆ ಸಂಬಂಧಿಸಿ ತನಿಖೆ ನಡೆಸಿ ಶಾಸಕ ಜಮೀರ್‌ ಅಹಮ್ಮದ್ ಸೇರಿದಂತೆ ತಪ್ಪಿತಸ್ಥರ ವಿರುದ್ಧ ಕ್ರಮಕೈಕೊಳ್ಳಬೇಕು’ ಎಂದು ಸಂಸದ ಭಗವಂತ ಖೂಬಾ ಆಗ್ರಹಿಸಿದರು.

‘ಕ್ವಾರಂಟೈನ್ ಮಾಡಲು ಹೋಗಿದ್ದ ವೈದ್ಯಕೀಯ ಸಿಬ್ಬಂದಿ ಹಾಗೂ ಪೊಲೀಸರ ಮೇಲೆ ದಾಳಿ ನಡೆಸಿದ ದುಷ್ಕರ್ಮಿಗಳ ಪರವಾಗಿ ಜಮೀರ್ ಮಾತನಾಡಿರುವುದು ಖಂಡನಾರ್ಹ’ ಎಂದು ನಗರದ ಬಿಜೆಪಿ ಜಿಲ್ಲಾ ಘಟಕದ ಕಚೇರಿಯಲ್ಲಿ ಮಂಗಳವಾರ ಮಾಧ್ಯಮಗೋಷ್ಠಿಯಲ್ಲಿ ಹೇಳಿದರು.

‘ಕ್ವಾರಂಟೈನ್‌ಗೆ ಜನರನ್ನು ರಾತ್ರಿ ಕರೆದುಕೊಂಡು ಹೋಗುವ ಅವಶ್ಯಕತೆ ಏನಿತ್ತು ಎಂದು ಪ್ರಶ್ನಿಸುವ ಮೂಲಕ ಅಜ್ಞಾನ ಪ್ರದರ್ಶಿಸಿದ್ದಾರೆ. ಕೋವಿಡ್–19 ಸೋಂಕು ಹರಡುವ ಭಯದಿಂದಾಗಿ ಜನ ಸಂಕಷ್ಟದಲ್ಲಿದ್ದಾರೆ. ವೈದ್ಯಕೀಯ ಸಿಬ್ಬಂದಿಗೆ ನೈತಿಕ ‌ಸ್ಥೈರ್ಯ ತುಂಬುವ ಬದಲು ದುಷ್ಕರ್ಮಿಗಳ ಪರವಾನಗಿ ಮಾತನಾಡಿದ್ದಾರೆ’ ಎಂದು ಆರೋಪಿಸಿದರು.

‘ರಾಜ್ಯ ಸರ್ಕಾರ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವುದು ಸ್ವಾಗತಾರ್ಹವಾಗಿದೆ. ಶಾಸಕ ಜಮೀರ್ ಅಹ್ಮದ್‌ ಅವರು ದಾಳಿಕೋರರಿಗೆ ಕುಮ್ಮುಕ್ಕು ನೀಡಿರುವುದು ಮೇಲ್ನೋಟಕ್ಕೆ ಕಂಡು ಬರುತ್ತಿದೆ. ಪೊಲೀಸರು ತನಿಖೆ ನಡೆಸಿ ತಪ್ಪು ಮಾಡಿದವರ ವಿರುದ್ಧ ಕಾನೂನು ಕ್ರಮ ಜರಗಿಸಬೇಕು’ ಎಂದು ಆಗ್ರಹಿಸಿದರು.

ವಿಧಾನ ಪರಿಷತ್‌ ಸದಸ್ಯ ರಘುನಾಥ ಮಲ್ಕಾಪುರೆ, ಬಸವರಾಜ ಹೊಕ್ರಾಣಿ ಹಾಗೂ ಬಸವರಾಜ ಜೋಜನಾ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು