ಬೀದರ್: ಬೀದರ್ ನಗರಸಭೆಯ ವಾರ್ಡ್ ಸಂಖ್ಯೆ 26 ಹಾಗೂ 32ರಲ್ಲಿ ಬೆಳಿಗ್ಗೆ 7ರಿಂದ ಶಾಂತಿಯುತವಾಗಿ ಮತದಾನ ಆರಂಭವಾಗಿದೆ. ಮತದಾರರು ಮತಗಟ್ಟೆಗಳ ಬಳಿ ಸಾಲುಗಟ್ಟಿ ನಿಂತಿದ್ದಾರೆ.
ಮತಗಟ್ಟೆಗಳ ಸಮೀಪ ಅಭ್ಯರ್ಥಿಗಳ ಬೆಂಬಲಿಗರು ಹಾಗೂ ಕಾರ್ಯಕರ್ತರು ಮತದಾರರಿಗೆ ಮತಗಟ್ಟೆ ಸಂಖ್ಯೆಯ ಚೀಟಿ ಬರೆದುಕೊಡುತ್ತಿದ್ದಾರೆ. ಆಶಾ ಕಾರ್ಯಕರ್ತೆಯರು ಸ್ಯಾನಿಟೈಸರ್ ಹಾಕಿ, ಥರ್ಮಲ್ ಸ್ಕ್ರಿನಿಂಗ್ ಮಾಡಿ ಮತದಾರರನ್ನು ಒಳ ಬಿಡುತ್ತಿದ್ದಾರೆ. ವಾರ್ಡ್ 26ರಲ್ಲಿ 7 ಮಂದಿ ಹಾಗೂ 23ರಲ್ಲಿ ಐವರು ಕಣದಲ್ಲಿದ್ದಾರೆ. 10 ಮತಗಟ್ಟೆಗಳಲ್ಲಿ ಮತದಾನ ನಡೆದಿದೆ.
ಬಸವಕಲ್ಯಾಣ ನಗರಸಭೆಯ ಎರಡು ವಾರ್ಡ್‌ಗಳಿಗೂ ಸಹ ಉಪ ಚುನಾವಣೆ ನಡೆಯುತ್ತಿದೆ. ಬಸವಕಲ್ಯಾಣ ವಾರ್ಡ್ ಸಂಖ್ಯೆ 11ರಲ್ಲಿ ಮೂವರು ಹಾಗೂ ವಾರ್ಡ್ ಸಂಖ್ಯೆ 23ರಲ್ಲಿ ಇಬ್ಬರು ಸ್ಪರ್ಧಿಸಿದ್ದಾರೆ. ಮತಗಟ್ಟೆಗಳಲ್ಲಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.