ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೀದರ್-ನಾಂದೇಡ್ ರೈಲು ಮಾರ್ಗ ಶೀಘ್ರ ಕಾಮಗಾರಿ ಆರಂಭ

Last Updated 13 ಆಗಸ್ಟ್ 2020, 6:55 IST
ಅಕ್ಷರ ಗಾತ್ರ

ಬೀದರ್: ಬೀದರ್-ನಾಂದೇಡ್ ಹೊಸ ರೈಲು ಮಾರ್ಗ ನಿರ್ಮಾಣ ಹಾಗೂ ಬೀದರ್- ಕಲಬುರ್ಗಿ ರೈಲು ಮಾರ್ಗದ ವಿದ್ಯುದ್ದೀಕರಣ ಕಾಮಗಾರಿಗಳು ಕೆಲವೇ ದಿನಗಳಲ್ಲಿ ಆರಂಭವಾಗಲಿವೆ ಎಂದು ಸಂಸದ ಭಗವಂತ ಖೂಬಾ ತಿಳಿಸಿದ್ದಾರೆ.

ಸಿಕಂದರಾಬಾದ್‍ನಲ್ಲಿ ದಕ್ಷಿಣ ಮಧ್ಯ ರೈಲ್ವೆ ಪ್ರಧಾನ ವ್ಯವಸ್ಥಾಪಕ ಗಜಾನನ ಮಲ್ಯಾ ಅವರನ್ನು ಬುಧವಾರ ಭೇಟಿ ಮಾಡಿ ಈ ಕುರಿತು ಚರ್ಚೆ ನಡೆಸಲಾಗಿದೆ. ಕೊರೊನಾ ಸೋಂಕಿನ ಕಾರಣ ಸ್ವಲ್ಪ ಸಮಯದವರೆಗೆ ರೈಲ್ವೆಗೆ ಸಂಬಂಧಿಸಿದ ಕಾಮಗಾರಿಗಳು ಸ್ಥಗಿತಗೊಂಡಿದ್ದವು. ಇದೀಗ ಬೀದರ್ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಎಲ್ಲ ಕಾಮಗಾರಿಗಳನ್ನು ಪೂರ್ಣಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಭರವಸೆ ನೀಡಿದ್ದಾರೆ ಎಂದು ಹೇಳಿದ್ದಾರೆ.

₹ 2,152 ಕೋಟಿ ವೆಚ್ಚದಲ್ಲಿ 155 ಕಿ.ಮೀ. ಉದ್ದದ ಬೀದರ್-ನಾಂದೇಡ್ ಹೊಸ ರೈಲು ಮಾರ್ಗಕ್ಕೆ ಮಂಜೂರಾತಿ ದೊರೆತಿದ್ದು, ಅಂದಾಜು ಪಟ್ಟಿಯನ್ನು ಆದಷ್ಟು ಬೇಗ ಸಿದ್ಧಪಡಿಸಿ ರೈಲ್ವೆ ಮಂಡಳಿಗೆ ಸಲ್ಲಿಸಲು ಕೋರಿದ್ದೇನೆ. ಬೀದರ್- ಕಲಬುರ್ಗಿ ರೈಲು ಮಾರ್ಗದ ವಿದ್ಯುದ್ದೀಕರಣ ಕಾಮಗಾರಿಯನ್ನೂ ಶೀಘ್ರ ಆರಂಭಿಸಲು ಮನವಿ ಮಾಡಿದ್ದೇನೆ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT