ಬೀದರ್: ಕಬ್ಬು ಪೂರೈಸಿದ ರೈತರ ಬಿಲ್ ಪಾವತಿಗೆ ಮುಕ್ತ ಮಾರುಕಟ್ಟೆಯಲ್ಲಿ ಮಾರಾಟ ಮಾಡುವುದ್ಕಾಗಿ 12,500 ಟನ್ ಹೆಚ್ಚುವರಿ ಸಕ್ಕರೆ ಬಿಡುಗಡೆಗೆ ಆದೇಶ ನೀಡಬೇಕೆಂದು ನಾರಂಜಾ ಸಹಕಾರ ಸಕ್ಕರೆ ಕಾರ್ಖಾನೆ (ಎನ್ಎಸ್ಎಸ್ಕೆ) ಅಧ್ಯಕ್ಷ ಸೂರ್ಯಕಾಂತ ನಾಗಮಾರಪಳ್ಳಿ ಮನವಿ ಮಾಡಿದ್ದಾರೆ.

ಅವರು ಈ ಸಂಬಂಧ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರಿಗೆ ಮನವಿ ಪತ್ರ ಸಲ್ಲಿಸಿ, ಕೋರಿದ್ದಾರೆ.

ಕಾರ್ಖಾನೆ 2025-26ನೇ ಹಂಗಾಮಿನ ಕಬ್ಬು ನುರಿಸುವ ಕಾರ್ಯವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಒಟ್ಟು 3,17,680.390 ಮೆಟ್ರಿಕ್ ಟನ್ ಕಬ್ಬು ನುರಿಸಿದೆ. ಈ ಹಂಗಾಮಿಗೆ ಕಬ್ಬು ಪೂರೈಸಿದ ರೈತರಿಗೆ ಪ್ರತಿ ಮೆ.ಟನ್ ಕಬ್ಬಿಗೆ ಕಟಾವು ಮತ್ತು ಸಾಗಾಣಿಕೆ ವೆಚ್ಚವನ್ನು ಹೊರತುಪಡಿಸಿ ₹2,800 ಗಳಂತೆ ಪಾವತಿ ಮಾಡಲಾಗುತ್ತಿದೆ. ಹಂಗಾಮಿನಲ್ಲಿ ನುರಿಸಲಾದ ಕಬ್ಬಿಗೆ ಸಂಬಂಧಿಸಿದಂತೆ ಒಟ್ಟು ₹8,895.05 ಲಕ್ಷ ಪಾವತಿಸಬೇಕಾಗಿದೆ. ಇದರಲ್ಲಿ ಏಪ್ರಿಲ್ 15ರ ವರೆಗೆ ₹5,097.76 ಲಕ್ಷ ಕಬ್ಬಿನ ಬಿಲ್ ಪಾವತಿಸಲಾಗಿದೆ. ಇನ್ನೂ ₹3,797.72 ಲಕ್ಷ ಪಾವತಿಸುವುದು ಬಾಕಿ ಇದೆ ಎಂದು ಜಿಲ್ಲಾಧಿಕಾರಿಯವರಿಗೆ ಸಲ್ಲಿಸಿರುವ ಮನವಿಯಲ್ಲಿ ಮಾಹಿತಿ ನೀಡಿದ್ದಾರೆ.

ಬ್ಯಾಂಕುಗಳಿಂದ ಪಡೆದ ಸಾಲದ ಮೇಲಿನ ಅಧಿಕ ಬಡ್ಡಿ, ಸರ್ಕಾರದ, ಜನಪ್ರತಿನಿಧಿಗಳ ಹಾಗೂ ಜಿಲ್ಲಾಡಳಿತದ ನಿರ್ಣಯ ಮತ್ತು ರೈತ ಸಂಘಟನೆಗಳ ಒತ್ತಡದಿಂದ ಎಫ್ಆರ್ಪಿಗಿಂತ ಅಧಿಕ ಬೆಲೆ ಪಾವತಿ, ಜಿಲ್ಲೆಯ ಇತರೆ ಸಹಕಾರಿ ಸಕ್ಕರೆ ಕಾರ್ಖಾನೆಗಳ ಸ್ಪರ್ಧೆ ಮತ್ತು ಮಹಾಸಭೆಯ ನಿರ್ಣಯದ ಪ್ರಕಾರ ರೈತರಿಗೆ ಉಚಿತ ಸಕ್ಕರೆ ವಿತರಣೆ ಮಾಡಿರುವುದು,ಯಂತ್ರೋಪಕರಣಗಳ ಸವಕಳಿ ಮುಂತಾದ ಕಾರಣಗಳಿಂದಾಗಿ ಕಾರ್ಖಾನೆ ಆರ್ಥಿಕವಾಗಿ ತೀವ್ರ ಸಮಸ್ಯೆಯಲ್ಲಿ ಸಿಲುಕಿದೆ. ಜೊತೆಗೆ ಬೇರೆ ಯಾವುದೇ ರೀತಿ ಆರ್ಥಿಕ ಸಂಪನ್ಮೂಲಗಳಿಲ್ಲದೇ ಇರುವುದರಿಂದ ಸಂಪೂರ್ಣವಾಗಿ ಸಕ್ಕರೆ ಮಾರಾಟವನ್ನೇ ಅವಲಂಬಿಸಬೇಕಾಗಿದೆ. ಸಕ್ಕರೆ ಮಾರಾಟದಿಂದ ಬರುವ ಮೊತ್ತದಿಂದ ಕಬ್ಬು ಪೂರೈಸಿದ ರೈತರಿಗೆ ಕಬ್ಬಿನ ಬಿಲ್ ಪಾವತಿ ಮಾಡಬೇಕಾಗಿರುತ್ತದೆ ಎಂದು ತಿಳಿಸಿದ್ದಾರೆ.

ಕೇಂದ್ರ ಸರ್ಕಾರದ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯು ಸಕ್ಕರೆಯನ್ನು ಮುಕ್ತ ಮಾರುಕಟ್ಟೆಯಲ್ಲಿ ಮಾರಾಟ ಮಾಡಲು ಮಾಹೆವಾರು ಹೊರಡಿಸುವ ಆದೇಶದಲ್ಲಿ ತೀರಾ ಕಡಿಮೆ ಪ್ರಮಾಣದಲ್ಲಿ ಬಿಡುಗಡೆ ಮಾಡುತ್ತಿದೆ. ಪ್ರಸಕ್ತ ಸಾಲಿನ ಏಪ್ರಿಲ್ ನಲ್ಲಿ ಬರೀ 5,124 ಮೆ.ಟನ್ ಸಕ್ಕರೆಯನ್ನು ಮಾತ್ರ ಬಿಡುಗಡೆ ಮಾಡಲಾಗಿದೆ. ಇದರಿಂದಾಗಿ ರೈತರ ಕಬ್ಬಿನ ಬಾಕಿ ಬಿಲ್ ಪಾವತಿ ಕಷ್ಟಕರವಾಗಿದೆ ಎಂದು ತಿಳಿಸಿದ್ದಾರೆ.

ಮುಖಂಡರಾದ ಶರಣಪ್ಪ ಲಕಶೆಟ್ಟಿ ಮಳಚಾಪುರೆ, ಸತೀಶ ಪಾಟೀಲ್ ರುದನೂರೆ, ರಾಜು ಅಂಬ್ರೆ ರುದನೂರೆ, ಶಂಕರ ಪಾಟೀಲ್ ರುದನೂರೆ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260416-33-1349733509

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.