ಶನಿವಾರ, 25 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೇಹಾ ಹತ್ಯೆ ಆರೋಪಿಗೆ ಗಲ್ಲು ವಿಧಿಸಿ: ಸಹಿ ಸಂಗ್ರಹ ಅಭಿಯಾನ

Published 3 ಮೇ 2024, 8:47 IST
Last Updated 3 ಮೇ 2024, 8:47 IST
ಅಕ್ಷರ ಗಾತ್ರ

ಔರಾದ್: ‘ಹುಬ್ಬಳ್ಳಿಯಲ್ಲಿ ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆ ಮಾಡಿದ ಆರೋಪಿ ಫಯಾಜ್‍ಗೆ ಗಲ್ಲು ಶಿಕ್ಷೆ ನೀಡುವಂತೆ’ ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಕಾರ್ಯಕರ್ತರು ಪಟ್ಟಣದಲ್ಲಿ ಗುರುವಾರ ಸಹಿ ಸಂಗ್ರಹ ಅಭಿಯಾನ ನಡೆಸಿದರು.

ಪಟ್ಟಣದ ಇಕ್ರಾ ಪಿಯು ಕಾಲೇಜಿನಲ್ಲಿ ನಡೆದ ಸಹಿ ಸಂಗ್ರಹ ಅಭಿಯಾನದಲ್ಲಿ ಎಬಿವಿಪಿ ಜಿಲ್ಲಾ ಸಂಚಾಲಕ ಶಶಿಕಾಂತ ರಾಕ್ಲೆ ‘ಸಿಐಡಿ ತನಿಖೆಯಿಂದ ನೊಂದ ಕುಟುಂಬಸ್ಥರಿಗೆ ನ್ಯಾಯ ಸಿಗುವುದಿಲ್ಲ. ಇದನ್ನು ಕೂಡಲೇ ಸಿಬಿಐ ತನಿಖೆಗೆ ಒಪ್ಪಿಸಬೇಕು’ ಎಂದು ಆಗ್ರಹಿಸಿದರು.

‘ಈ ರೀತಿಯ ಪ್ರಕರಣದಲ್ಲಿ ಆರೋಪಿಗಳನ್ನು ಗಲ್ಲಿಗೇರಿಸಿದರೆ ಮಾತ್ರ ಪುನಃ ಇಂತಹ ಪ್ರಕರಣಗಳು ನಡೆಯವುದಿಲ್ಲ. ಹೀಗಾಗಿ ಆರೋಪಿ ಫಯಾಜ್‍ಗೆ ಗಲ್ಲಿಗೇರಿಸಲು ಆಗ್ರಹಿಸಿ ಎಬಿವಿಪಿಯಿಂದ ರಾಜ್ಯಾದ್ಯಂತ ಸಹಿ ಸಂಗ್ರಹ ಅಭಿಯಾನ ನಡೆಸಿದ್ದೇವೆ. ಇದಕ್ಕೆ ಎಲ್ಲ ಕಡೆ ಉತ್ತಮ ಸ್ಪಂದನೆ ಕೂಡ ಸಿಗುತ್ತಿದೆ’ ಎಂದು ಹೇಳಿದರು.

‘ಈ ಪ್ರಕರಣ ಸಂಬಂಧ ಆರಂಭದಲ್ಲಿ ಸರ್ಕಾರ ನೀಡಿದ ಹೇಳಿಕೆ ನೋಡಿದರೆ ತನಿಖೆ ದಾರಿ ತಪ್ಪಿಸುವುದಾಗಿದೆ. ಹೀಗಾಗಿ ಸಿಬಿಐ ತನಿಖೆ ನಡೆದು ಆರೋಪಿಗೆ ಗಲ್ಲು ಶಿಕ್ಷೆ ನೀಡುವಂತೆ ರಾಷ್ಟ್ರಪತಿಗೆ ಸಹಿ ಸಂಗ್ರಹ ಅಭಿಯಾನ ವರದಿ ಸಲ್ಲಿಸುತ್ತೇವೆ’ ಎಂದರು.

ಎಬಿವಿಪಿ ಮುಖಂಡ ಅಶೋಕ ಶೆಂಬೆಳ್ಳಿ, ಹೇಮಂತ, ರಾಹುಲ್, ಮಲ್ಲಿಕಾರ್ಜುನ, ಅನೀಲ ಮೇತ್ರೆ ವಿದ್ಯಾರ್ಥಿಗಳು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT