ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಕ್ಕಳಸ್ನೇಹಿ ಕಲಿಕಾ ಕೇಂದ್ರ ಉದ್ಘಾಟನೆ

ಹುಲಸೂರ
Published 3 ಮೇ 2024, 8:48 IST
Last Updated 3 ಮೇ 2024, 8:48 IST
ಅಕ್ಷರ ಗಾತ್ರ

ಹುಲಸೂರ: ‘ಮಕ್ಕಳಲ್ಲಿ ಓದುವ ಹವ್ಯಾಸ ಬೆಳೆಸುವ ಉದ್ದೇಶದಿಂದ ಹಾಲಹಳ್ಳಿ ಗ್ರಾಮದಲ್ಲಿ ಮಕ್ಕಳ ಸ್ನೇಹಿ ಕಲಿಕಾಕೇಂದ್ರಗಳನ್ನು ತೆರೆಯಲಾಗುತ್ತಿದೆ’ ಎಂದು ವಾಣಿಜ್ಯ ತೆರಿಗೆ ಇಲಾಖೆಯ ಸಹಾಯಕ ಆಯುಕ್ತ ಮಹೇಶ್ ಪಾಟೀಲ್ ತಿಳಿಸಿದರು.

ತಾಲ್ಲೂಕಿನ ಹಾಲಹಳ್ಳಿ ಗ್ರಾಮದಲ್ಲಿ ಮಕ್ಕಳ ಸ್ನೇಹಿ ಕಲಿಕಾ ಕೇಂದ್ರ ಉದ್ಘಾಟಿಸಿ ಮಾತನಾಡಿದ ಅವರು, ‘ಮಕ್ಕಳಲ್ಲಿ ಶೈಕ್ಷಣಿಕ ಚಟುವಟಿಕೆ ಹಿಂದುಳಿದಿದೆ. ಮಕ್ಕಳು ಮೊಬೈಲ್‌, ಟ್ಯಾಬ್‌ಗಳ ಮೊರೆಹೋಗಿದ್ದಾರೆ. ಅವರಲ್ಲಿ ಓದಿನ ಆಸಕ್ತಿ ಮೂಡಿಸಲು ಇಂತಹ ಕಲಿಕಾ ಕೆಂದ್ರದ ಅಗತ್ಯವಿದೆ’ ಎಂದರು.

ಶುಭೋದಯ ರೈತ ಒಕ್ಕೂಟದ ನಿರ್ದೇಶಕ ಅಶೋಕ ಸಜ್ಜನ ಮಾತನಾಡಿ, ‘ಕಲಿಕಾ ಕೇಂದ್ರಗಳಿಂದ ಮಕ್ಕಳ ಬೌದ್ಧಿಕಮಟ್ಟ ಸುಧಾರಣೆಗೊಳ್ಳುವುದರ ಜೊತೆಗೆ ಓದಿನ ಬಗ್ಗೆ ಆಸಕ್ತಿ ಮೂಡಿಸಲು ಸಾಧ್ಯವಾಗುತ್ತದೆ. ಇದನ್ನು ಸಮುದಾಯದತ್ತ ಕಾರ್ಯಕ್ರಮವಾಗಿಸಲು ಸಂಸ್ಥೆಯು ಸಂಪೂರ್ಣವಾಗಿ ಸಹಕರಿಸುವುದು’ ಎಂದರು.

ಈ ಸಂದರ್ಭದಲ್ಲಿ ದತ್ತಾತ್ರೇಯ.ಸಿ.ಪಾಟೀಲ್, ಶ್ರೀಶೈಲ ಪಾಟೀಲ್, ಬಸವರಾಜ್ ಮಠಪತಿ, ಗಣೇಶ್ ಕಾಳೆ, ಕಲಿಕಾ ಕೇಂದ್ರದ ಶಿಕ್ಷಕಿ ವಿದ್ಯಾ ಸೇರಿ ಮಕ್ಕಳು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT