ಸೋಮವಾರ, ಫೆಬ್ರವರಿ 17, 2020
27 °C
ರಾಜ್ಯಮಟ್ಟದ ಪಶು ಮೇಳ

ರೈತರಿಂದ 20 ಕ್ವಿಂಟಲ್‌ ತೊಗರಿ ಖರೀದಿ: ಯಡಿಯೂರಪ್ಪ ಘೋಷಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೀದರ್: ‘ಸರ್ಕಾರದ ಬೊಕ್ಕಸಕ್ಕೆ ಹಾನಿಯಾದರೂ ಚಿಂತೆ ಇಲ್ಲ. ಬೆಂಬಲ ಬೆಲೆಯಲ್ಲಿ ಪ್ರತಿ ರೈತರಿಂದ 10 ಕ್ವಿಂಟಲ್‌ ಬದಲು 20 ಕ್ವಿಂಟಲ್‌ ತೊಗರಿ ಖರೀದಿಸಲಾಗುವುದು’ ಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಪ್ರಕಟಿಸಿದರು.

ತಾಲ್ಲೂಕಿನ ಕಮಠಾಣ ಸಮೀಪದ ಕರ್ನಾಟಕ ಪಶು ವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಆವರಣದಲ್ಲಿ ಪಶು ಪಾಲನೆ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯಿಂದ ಆಯೋಜಿಸಿರುವ ಮೂರು ದಿನಗಳ ರಾಜ್ಯಮಟ್ಟದ ಪಶು ಮೇಳಕ್ಕೆ ಶುಕ್ರವಾರ ಚಾಲನೆ ನೀಡಿ ಅವರು ಮಾತನಾಡಿದರು. ಈ ಕುರಿತು ಸ್ಥಳದಲ್ಲೇ ಅಧಿಕಾರಿಗಳಿಗೆ ಸೂಚನೆ ನೀಡಿದರು.

‘ರಾಜ್ಯ ಸರ್ಕಾರ ಆವೃತ್ತ ನಿಧಿಯನ್ನು ತೆಗೆದು ಬೆಂಬಲ ಬೆಲೆಯಲ್ಲಿ ರೈತರ ಉತ್ಪನ್ನಗಳನ್ನು ಖರೀದಿ ಮಾಡುವುದು ಅನಿವಾರ್ಯವಾಗಿದೆ. ಆ ಕೆಲಸವನ್ನು ಸರ್ಕಾರ ಮಾಡಲಿದೆ’ ಎಂದು ತಿಳಿಸಿದರು.

‘ಕಲ್ಯಾಣ ಕರ್ನಾಟಕದ ಜತೆ ನನಗೆ ಭಾವನಾತ್ಮಕ ಸಂಬಂಧ ಇದೆ. ಕಲ್ಯಾಣ ಕರ್ನಾಟಕದ ಅಭಿವೃದ್ಧಿ ರಾಜ್ಯ ಸರ್ಕಾರದ ಗುರಿಯಾಗಿದೆ. ಅಭಿವೃದ್ಧಿ ವಿಷಯ ಬಂದಾಗ ಎಲ್ಲರೂ ಒಟ್ಟಾಗಿ ಕೆಲಸ ಮಾಡಬೇಕು. ವೇದಿಕೆ ಮೇಲೆ ಎಲ್ಲರೂ ಪಕ್ಷಭೇದ ಮರೆತು ಸೇರಿದ್ದೇವೆ’ ಎಂದು ತಿಳಿಸಿದರು.

ಶಾಸಕ ಬಂಡೆಪ್ಪ ಕಾಶೆಂಪೂರ್ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಗೀತಾ ಚಿದ್ರಿ, ಶಾಸಕರಾದ ರಾಜಶೇಖರ ಪಾಟೀಲ, ಈಶ್ವರ ಖಂಡ್ರೆ, ಬಂಡೆಪ್ಪ ಕಾಶೆಂಪೂರ್, ಬಿ.ನಾರಾಯಣರಾವ್, ಅವಿನಾಶ ಜಾಧವ, ವಿಧಾನ ಪರಿಷತ್ ಸದಸ್ಯರಾದ ರಘುನಾಥರಾವ್‌ ಮಲ್ಕಾಪೂರೆ, ವಿಜಯಸಿಂಗ್, ಅರವಿಂದಕುಮಾರ ಅರಳಿ, ಚಂದ್ರಶೇಖರ ಪಾಟೀಲ ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು