ಬೀದರ್: ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಪಲ್ಲವಿ ಜಿ. ಏ.18ರಿಂದ 20ರವರೆಗೆ ಬೀದರ್ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳುವರು.

18ರಂದು ಬೆಳಿಗ್ಗೆ 10.15ಕ್ಕೆ ಬೀದರ್ನ ನೌಬಾದ್ ಚೌಳಿ ಕಮಾನ್ ಹತ್ತಿರದ ಪರಿಶಿಷ್ಟ ಜಾತಿಯ ಅಲೆಮಾರಿ ಸಿಂದೊಳ್ಳಿ ಮತ್ತು ಮಾಂಗ್ಗಾರುಡಿ ಸಮುದಾಯದ ಕುಟುಂಬಗಳು ವಾಸಸ್ಥಳ ವೀಕ್ಷಿಸಿ, ಕುಂದು ಕೊರತೆ ಆಲಿಸುವರು. 11.30ಕ್ಕೆ ಇಲಾಖಾ ಅಧಿಕಾರಿಗಳೊಂದಿಗೆ ಸಭೆ ನಡೆಸುವರು.

ಏ.19ರಂದು ಬೆಳಿಗ್ಗೆ 10ಕ್ಕೆ ನಿಗಮದ ವಿವಿಧ ಯೋಜನೆಗಳ ಕುರಿತು ನಡೆದ ಪ್ರಗತಿ ಪರಿಶೀಲನಾ ಸಭೆ ಅನುಪಾಲನೆ ಮತ್ತು ಜಿಲ್ಲಾಡಳಿತದೊಂದಿಗೆ ನಡೆಸಲಾದ ಪತ್ರ ವ್ಯವಹಾರಗಳ ಕುರಿತು ಸಮಾಲೋಚನಾ ಸಭೆ ನಡೆಸುವರು. ಸಂಜೆ 4ಕ್ಕೆ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಭೇಟಿ, ಬೀದರ್ನಲ್ಲಿ ವಾಸ್ತವ್ಯ, 20ರಂದು ಬೆಳಿಗ್ಗೆ 10ರಂದು ಬಸವಕಲ್ಯಾಣದ ಬಸವ ಜಯಂತಿಯಲ್ಲಿ ಭಾಗವಹಿಸಲಿದ್ದಾರೆ. ಮಧ್ಯಾಹ್ನ 2ಕ್ಕೆ ಬೆಂಗಳೂರಿಗೆ ಪ್ರಯಾಣ ಬೆಳೆಸಲಿದ್ದಾರೆ ಎಂದು ಅಧ್ಯಕ್ಷರ ವಿಶೇಷ ಕರ್ತವ್ಯ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260418-33-1827662012

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.