ಮರಕಲ್(ಜನವಾಡ): ಬೀದರ್ ತಾಲ್ಲೂಕಿನ ಮರಕಲ್ ಗ್ರಾಮದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಕಾಮಗಾರಿ ಸ್ಥಳದಲ್ಲಿ ಕಾರ್ಮಿಕರಿಗೆ ಕೇಂದ್ರದ ವಿಮೆ ಯೋಜನೆಗಳ ಕುರಿತು ಸೋಮವಾರ ಜಾಗೃತಿ ಮೂಡಿಸಲಾಯಿತು.

ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸುನಿತಾ ಬನ್ನೇರ್ ಹಾಗೂ ವಿಮಾ ಏಜೆನ್ಸಿ ಪ್ರತಿನಿಧಿಗಳು ಯೋಜನೆಗಳ ಸಮಗ್ರ ಮಾಹಿತಿ ನೀಡಿದರು.

‘18 ರಿಂದ 50 ವರ್ಷದ ಒಳಗಿನ ಕಾರ್ಮಿಕರು ವರ್ಷಕ್ಕೆ ಕೇವಲ ₹436 ಕಂತು ಪಾವತಿಸಿ ಪ್ರಧಾನಮಂತ್ರಿ ಜೀವನ್ ಜ್ಯೋತಿ ಬಿಮಾ ಯೋಜನೆಯಡಿ ವಿಮೆ ಮಾಡಿಸಬಹುದು. ವಿಮೆ ಮಾಡಿಸಿದವರು ಯಾವುದೇ ಕಾರಣದಿಂದ ಮೃತಪಟ್ಟರೆ ₹2 ಲಕ್ಷ ವಿಮೆ ಪರಿಹಾರ ಸಿಗಲಿದೆ’ ಎಂದು ಹೇಳಿದರು.

‘ಪ್ರಧಾನ ಮಂತ್ರಿ ಸುರಕ್ಷಾ ಬಿಮಾ ಯೋಜನೆಯಡಿ 18 ರಿಂದ 70 ವರ್ಷದ ಒಳಗಿನ ಕಾರ್ಮಿಕರು ವಾರ್ಷಿಕ ₹20 ಕಂತು ಪಾವತಿಸಿ ವಿಮೆ ಮಾಡಿಸಬಹುದು. ಅಪಘಾತದಲ್ಲಿ ಮರಣ ಹೊಂದಿದರೆ ಅಥವಾ ಅಂಗವಿಕಲರಾದರೆ ₹2 ಲಕ್ಷ ಹಾಗೂ ಭಾಗಶಃ ಅಂಗವಿಕಲರಾದರೆ ₹1 ಲಕ್ಷ ಪರಿಹಾರ ದೊರೆಯಲಿದೆ’ ಎಂದು ತಿಳಿಸಿದರು.

ಬ್ಯಾಂಕ್ ಖಾತೆ ಹೊಂದಿದ ಅನೇಕ ನರೇಗಾ ಕಾರ್ಮಿಕರು ಸ್ಥಳದಲ್ಲೇ ವಿಮೆ ಮಾಡಿಸಿದರು.

ಲೀಡ್ ಬ್ಯಾಂಕ್ ಸಂಯೋಜಕ ರಾಜೇಂದ್ರ ಜಾಧವ್, ಸುಧಾಕರ, ಸತ್ಯ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260602-33-1154203556

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.