ಗುರುವಾರ , ಜೂಲೈ 9, 2020
26 °C

ಬೀದರ್: ಅಕ್ರಮ ಮದ್ಯ, ಕಳ್ಳಬಟ್ಟಿ ವಶ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೀದರ್: ಜಿಲ್ಲೆಯ ಎರಡು ಕಡೆಗಳಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಮದ್ಯ ಹಾಗೂ ಕಳ್ಳಬಟ್ಟಿಯನ್ನು ಅಬಕಾರಿ ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಬೀದರ್ ತಾಲ್ಲೂಕಿನ ಸೋಲಪುರ ಗ್ರಾಮದ ರಸ್ತೆಯಲ್ಲಿ ಕಾರು ತಪಾಸಣೆ ನಡೆಸಿ 15.6 ಲೀಟರ್ ಮದ್ಯ ಜಪ್ತಿ ಮಾಡಿದ್ದಾರೆ.

ಬಸವಕಲ್ಯಾಣ ತಾಲ್ಲೂಕಿನ ಉಜಳಂಬದ ಹತ್ತಿರ ಎರಡು ದ್ವಿಚಕ್ರ ವಾಹನದ ಮೇಲೆ ಸಾಗಿಸುತ್ತಿದ್ದ 60 ಲೀಟರ್ ಕಳ್ಳಬಟ್ಟಿ ಹಾಗೂ 7.560 ಲೀಟರ್ ಮಹಾರಾಷ್ಟ್ರ ಮದ್ಯವನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಎರಡೂ ಕಡೆ ಆರೋಪಿಗಳು ಪರಾರಿಯಾಗಿದ್ದು, ಪ್ರಕರಣ ದಾಖಲಿಸಲಾಗಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು