ಬೀದರ್: ಬೀದರ್ ಜಿಲ್ಲೆಯಾದ್ಯಂತ 2026-27ನೇ ಸಾಲಿನಲ್ಲಿ ಖಾಸಗಿ ಶಾಲೆಗಳು ಹೊಸದಾಗಿ ಪ್ರವೇಶ ಪಡೆಯುತ್ತಿರುವವರಿಂದ ಟ್ಯೂಶನ್ ಶುಲ್ಕ ಹೆಚ್ಚಿಸಿ ಡೊನೇಶನ್ ವಸೂಲಿ ಮಾಡುತ್ತಿದ್ದು, ಜಿಲ್ಲಾಡಳಿತ ತಡೆಯಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ ಬೀದರ್ ಜಿಲ್ಲಾ ಘಟಕದ ಅಧ್ಯಕ್ಷ ಅರುಣ್ ಕೊಡಗೆ, ಪ್ರಮುಖರಾದ ಸೋಮನಾಥ ಮಡಕೆ, ಅಮರ ಗಾದಗಿ ಒತ್ತಾಯಿಸಿದ್ದಾರೆ.

‘ಡೊನೇಶನ್ ಹಾವಳಿ ನಿಯಂತ್ರಿಸಬೇಕು. ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಜಿಲ್ಲಾ ರೆಗ್ಯುಲೇಟಿಂಗ್ ಪ್ರಾಧಿಕಾರ ರಚಿಸಿ, ಸರ್ಕಾರದ ನಿಯಮ ಗಾಳಿಗೆ ತೂರಿದ ಶಾಲೆಗಳ ಮಾನ್ಯತೆ ರದ್ದುಪಡಿಸಬೇಕು. ಅನಧಿಕೃತ ಶಾಲೆಗಳ ಮಾನ್ಯತೆ ಇಲ್ಲದೆ ನಡೆಸುತ್ತಿರುವ ಶಾಲೆಗಳ ಮಾನ್ಯತೆ ರದ್ದುಗೊಳಿಸಿ, ಅಧಿಕೃತ ಕನ್ನಡ ಮಾಧ್ಯಮ/ಇಂಗ್ಲಿಷ್ ಮಾಧ್ಯಮ ಶಾಲೆಗಳ ಪಟ್ಟಿ ಬಿಡುಗಡೆಗೊಳಿಸಬೇಕು’ ಎಂದು ಆಗ್ರಹಿಸಿದ್ದಾರೆ.

‘ಜಿಲ್ಲೆಯಲ್ಲಿ ಬಹುತೇಕ ಎಲ್ಲಾ ಖಾಸಗಿ ಶಾಲೆಗಳು ಈಗಾಗಲೇ ಬೇಬಿ ಕ್ಲಾಸಿನಿಂದ ಎಲ್ಲ ತರಗತಿಯ ಪ್ರವೇಶಾತಿಯನ್ನು ಪ್ರಾರಂಭಿಸಿ ವಿದ್ಯಾರ್ಥಿಗಳ ಪಾಲಕರಿಂದ ಮನಬಂದಂತೆ ಡೊನೇಷನ್ ಪಡೆಯುತ್ತಿವೆ. ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳಲ್ಲಿ ಸರ್ಕಾರದ ನಿಯಮ ಮೀರಿ ಹಣ ವಸೂಲಿಗೆ ಮುಂದಾಗಿದ್ದರೂ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳು ಮೌನವಾಗಿದ್ದಾರೆ’ ಎಂದು ಆರೋಪಿಸಿದ್ದಾರೆ.

‘ಸರ್ಕಾರ ಇನ್ನೂ ಈ ವರ್ಷದ ಶೈಕ್ಷಣಿಕ ಪ್ರವೇಶಾತಿಯನ್ನು ಪ್ರಾರಂಭ ಮಾಡದಿದ್ದರೂ ಖಾಸಗಿ ಶಾಲೆಗಳು ಶುಲ್ಕ, ಬಟ್ಟೆ, ಶೂ, ಸಾಕ್ಸ್, ನೋಟ್ ಬುಕ್ಸ್ ಗಳನ್ನು ಶಾಲೆಗಳಲ್ಲಿ ಮಾರಾಟ ಮಾಡುತ್ತಿರುವುದು ಕಾನೂನು ಬಾಹಿರ. ಇಂಥ ಶಾಲೆಗಳ ಮೇಲೆ ಕಠಿಣ ಕಾನೂನು ಕ್ರಮ ಜರುಗಿಸಬೇಕು’ ಎಂದು ಆಗ್ರಹಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260405-33-1038163462

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.