ಬೀದರ್: ‘ಅನ್ಯಾಯವಾದಾಗ ಹೋರಾಟ ಮಾಡಿ ನ್ಯಾಯ ಕಂಡುಕೊಳ್ಳುವ ಪ್ರವೃತ್ತಿ ಬೆಳೆಸಿಕೊಳ್ಳಬೇಕು ಎಂದು ಕಲ್ಯಾಣ ಕರ್ನಾಟಕ ಹೋರಾಟ ಸಮಿತಿ ಸಂಸ್ಥಾಪಕ ಅಧ್ಯಕ್ಷ ಲಕ್ಷ್ಮಣ ದಸ್ತಿ ಹೇಳಿದರು.

ನಗರದ ಬಿ.ವಿ. ಭೂಮರಡ್ಡಿ ಕಾಲೇಜಿನ ಇತಿಹಾಸ ವಿಭಾಗ, ಕರ್ನಾಟಕ ರಾಜ್ಯ ಪತ್ರಾಗಾರ ಮತ್ತು ಗೆಜೆಟಿಯರ್ ಇಲಾಖೆ ಕಲಬುರಗಿ ವಿಭಾಗೀಯ ಕಚೇರಿ ಸಹಯೋಗದಲ್ಲಿ ಕಾಲೇಜಿನಲ್ಲಿ ಹಮ್ಮಿಕೊಂಡಿರುವ ಎರಡು ದಿನಗಳ ರಾಷ್ಟ್ರಮಟ್ಟದ ಬಹುಶಿಸ್ತಿಯ ವಿಚಾರ ಸಂಕಿರಣದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ಶನಿವಾರ ಮಾತನಾಡಿದರು.

ಸ್ವಾಮಿ ವಿವೇಕಾನಂದರು ಹೇಳಿದಂತೆ, ನಿನ್ನ ಮೇಲೆ ಅನ್ಯಾಯವಾದಾಗ ಅದಕ್ಕೆ ಪ್ರತಿಭಟನೆ ಮಾಡದಿದ್ದರೆ ಅದು ಸಹ ಮಹಾ ಪಾಪ. ಅವರ ಆಶಯದಂತೆ ಕಲ್ಯಾಣ ಕರ್ನಾಟಕದ ಭಾಗದ ವಿದ್ಯಾರ್ಥಿ/ವಿದ್ಯಾರ್ಥಿನಿಯರು ತಮ್ಮ ಹಕ್ಕುಗಳಿಗಾಗಿ ಸರ್ಕಾರದ ವಿರುದ್ಧ ಹೋರಾಟ ಮಾಡಬೇಕು ಎಂದು ಸಲಹೆ ಮಾಡಿದರು.

ಕಾರ್ಯಕ್ರಮ ಉದ್ಘಾಟಿಸಿದ ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆ ಸದಸ್ಯ ಡಾ. ರಜನೀಶ ವಾಲಿ, ಕಲ್ಯಾಣ ಕರ್ನಾಟಕದ ಭಾಗ ಹಿಂದುಳಿದಿದ್ದರೂ ಈ ಭಾಗದ ವಿದ್ಯಾರ್ಥಿಗಳು ಬುದ್ಧಿವಂತರಾಗಿದ್ದಾರೆ. ಶ್ರದ್ಧೆಯಿಂದ ಅಧ್ಯಯನ ಮಾಡಿ ಸ್ಫರ್ಧಾತ್ಮಕ ಪರೀಕ್ಷೆಗಳನ್ನು ಎದುರಿಸಿ ಉನ್ನತ ಹುದ್ದೆಗಳನ್ನು ಪಡೆದು 371(ಜೆ) ಅಡಿಯಲ್ಲಿ ಮುಖ್ಯವಾಹಿನಿಗೆ ಬರಬೇಕೆಂದು ಹೇಳಿದರು.

ಸದಾನಂದ ನೆಲ್ಕುದ್ರಿ ಮಾತನಾಡಿ, ಸರ್ದಾರ್ ವಲ್ಲಭಭಾಯ್ ಪಟೇಲ್ ಅವರಿಂದ ಈ ಭಾಗಕ್ಕೆ ವಿಮೋಚನೆ ಸಿಕ್ಕಿದೆ. 371(ಜೆ) ಸಂಪೂರ್ಣ ಪ್ರಯೋಜನ ಪಡೆದು ಈ ಭಾಗದವರು ಮೇಲೆ ಬರಬೇಕೆಂದು ತಿಳಿಸಿದರು.

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಸುರೇಶ ಚನಶೆಟ್ಟಿ, ಕರ್ನಾಟಕ ರಾಜ್ಯ ಪತ್ರಾಗಾರ ಗೆಜೆಟಿಯರ್ ಇಲಾಖೆಯ ಉಪನಿರ್ದೇಶಕ ವೀರಶೆಟ್ಟಿ, ಬಸವೇಶ್ವರ ಶಿಕ್ಷಣ ಕಾಲೇಜಿನ ಪ್ರಾಂಶುಪಾಲ ಮಲ್ಲಿಕಾರ್ಜುನ ಕನಕಟ್ಟೆ, ಪದವಿ ಕಾಲೇಜಿನ ಪ್ರಾಂಶುಪಾಲೆ ದೀಪಾ ರಾಗ, ಇತಿಹಾಸ ವಿಭಾಗದ ಮುಖ್ಯಸ್ಥೆ ಶಿವಲೀಲಾ ವೀರಯ್ಯ, ಹಿಂದಿ ವಿಭಾಗದ ಮುಖ್ಯಸ್ಥ ಮಾರುತಿ ಭೀಮಣ್ಣಾ, ಇತಿಹಾಸ ವಿಭಾಗದ ಉಪನ್ಯಾಸಕ ಬಸವರಾಜ ಎಸ್. ಬಿರಾದಾರ ಇದ್ದರು. ಕನ್ನಡ ವಿಭಾಗದ ಮುಖ್ಯಸ್ಥೆ ರೇಣುಕಾದೇವಿ ಎಸ್. ನಾಡಗೀತೆ ಹಾಡಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260418-33-1812336165

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.