ಬೀದರ್: ಮತದಾರರ ಪಟ್ಟಿ ವಿಶೇಷ ಪರಿಷ್ಕರಣಾ (ಎಸ್ಐಆರ್) ಕಾರ್ಯದ ವಿರುದ್ಧ ಪ್ರತಿಭಟನೆ ನಡೆಸಲು ತೀರ್ಮಾನಿಸಲಾಗಿದೆ.

ನಗರದ ಕರ್ನಾಟಕ ಸಾಹಿತ್ಯ ಸಂಘದ ಸಭಾ ಮಂಟಪದಲ್ಲಿ ಮಂಗಳವಾರ ನಡೆದ ಪ್ರಗತಿಪರ, ಜಾತ್ಯತೀತ ಪಕ್ಷಗಳು ಹಾಗೂ ಸಮಾಜಮುಖಿ ಸಮುದಾಯಗಳ ಸಂಘಟನೆಗಳ ಮಹತ್ವದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.

ಕೇಂದ್ರ ಚುನಾವಣಾ ಆಯೋಗದ ಕ್ರಮಗಳ ವಿರುದ್ಧ ಏ. 4ರಂದು ಬೆಳಿಗ್ಗೆ 11ಕ್ಕೆ ನಗರದ ಡಾ.ಬಿ.ಆರ್. ಅಂಬೇಡ್ಕರ್ ವೃತ್ತದ ಸಮೀಪದ ಐಬಿ ಕಚೇರಿಯಲ್ಲಿ ಸೇರಿ, ಅಲ್ಲಿಂದ ಪ್ರತಿಭಟನಾ ರ್ಯಾಲಿ ನಡೆಸಲು ನಿರ್ಧರಿಸಲಾಗಿದೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಕೋರಿದೆ.

ಎಸ್ಐಆರ್ ಪ್ರಕ್ರಿಯೆ ಮೂಲಕ ಸಾಮಾನ್ಯ ಜನರ ಮತದಾನದ ಹಕ್ಕು ಕಸಿದುಕೊಳ್ಳುವ ಪ್ರಯತ್ನ ನಡೆಯುತ್ತಿದೆ. ವಿಶೇಷವಾಗಿ ರೈತರು, ಕೂಲಿ ಕಾರ್ಮಿಕರು, ಆದಿವಾಸಿಗಳು, ಅಲೆಮಾರಿ ಸಮುದಾಯಗಳು ಹಾಗೂ ವಿವಾಹದ ನಂತರ ಹೆಸರು ಬದಲಿಸಿರುವ ಮಹಿಳೆಯರ ಮತಗಳನ್ನು ‘ಡೌಟ್ಫುಲ್’ ಎಂದು ಗುರುತಿಸಿ ಮತದಾರರ ಪಟ್ಟಿಯಿಂದ ಹೊರಗಿಡುತ್ತಿರುವುದು ಜನತಾಂತ್ರಿಕ ವ್ಯವಸ್ಥೆಗೆ ವಿರುದ್ಧವಾದುದು. ಈ ಪ್ರಕ್ರಿಯೆ ತಕ್ಷಣವೇ ನಿಲ್ಲಿಸಿ ಜನರ ಮತದಾನದ ಹಕ್ಕು ರಕ್ಷಿಸಬೇಕಿದೆ ಎಂದು ಸಭೆಯಲ್ಲಿ ಮುಖಂಡರು ಅಭಿಪ್ರಾಯಪಟ್ಟಿದ್ದಾರೆ.

ಸಭೆಯಲ್ಲಿ ಎದ್ದೇಳು ಕರ್ನಾಟಕ ಜಿಲ್ಲಾ ಸಂಯೋಜಕರು ಓಂಪ್ರಕಾಶ್ ರೊಟ್ಟೆ, ಮುಖಂಡರಾದ ಶ್ರೀಕಾಂತ್ ಸ್ವಾಮಿ, ಅಬ್ದುಲ್ ಮನ್ನಾನ್ ಸೇಠ್, ವಿನಯ್ ಕುಮಾರ್ ಮಾಳಗೆ, ಮಚೀಂದ್ರ ವಾಘಮಾರೆ, ನಿಜಾಮುದ್ದಿನ್, ಜಗದೀಶ್ವರ್ ಬಿರಾದಾರ, ಮಹೇಶ್ ಗೋರನಾಳಕರ್, ಸಿದ್ದು ಫುಲಾರೆ, ವಿಜಯಕುಮಾರ್, ಬಸವಕುಮಾರ ಪಾಟೀಲ್, ನೀಲಮ್ಮ ರೋಗನ್ ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260401-33-575402926

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.