ಶುಕ್ರವಾರ, ಏಪ್ರಿಲ್ 3, 2020
19 °C

ಬೀದರ್: ಸ್ವಯಂ ಪ್ರೇರಣೆಯಿಂದ ಬಂದ್‌ಗೆ ಒಪ್ಪಿಗೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೀದರ್: ಕೋವಿಡ್‌ 19 ಸೋಂಕು ಹರಡದಂತೆ ಮುಂಜಾಗ್ರತೆ ವಹಿಸುವ ಕುರಿತು ಇಲ್ಲಿಯ ನಗರಸಭೆ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಹೋಟೆಲ್‌, ಖಾನಾವಳಿ, ಬೇಕರಿ, ಪಾನ್ ಶಾಪ್ ಹಾಗೂ ಇತರ ಅಂಗಡಿಗಳ ಮಾಲೀಕರ ಸಭೆ ನಡೆಯಿತು.

ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಕೋವಿಡ್‌ 19 ಸೋಂಕು ನಿಯಂತ್ರಿಸಲು ಅಂಗಡಿಗಳನ್ನು ಮುಚ್ಚಿಡುವಂತೆ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದು, ‌ಎಲ್ಲರೂ ಸಹಕರಿಸಬೇಕು ಎಂದು ನಗರಸಭೆ ಆಯುಕ್ತ ಬಸಪ್ಪ ಮನವಿ ಮಾಡಿದರು.

‘ಮಲ್ಟಿಪ್ಲೆಕ್ಸ್, ಚಿತ್ರಮಂದಿರ, ಉದ್ಯಾ, ನಾಟಕ ಪ್ರದರ್ಶನ, ವಸ್ತು ಪ್ರದರ್ಶನ, ಸಂಗೀತ ಹಬ್ಬ, ಸರ್ಕಾರಿ ಸಮಾರಂಭಗಳನ್ನು ರದ್ದುಗೊಳಿಸಲಾಗಿದೆ. ಮಾರ್ಚ್‌ 31ರ ವರೆಗೆ ಹೇರ್ ಕಟಿಂಗ್ ಅಂಗಡಿ ಮತ್ತು ಪಾರ್ಲರ್‌ಗಳನ್ನು ಮುಚ್ಚಿಡಲು ಆದೇಶಿಸಲಾಗಿದೆ. ಯಾರಾದರೂ ಆದೇಶ ಉಲ್ಲಂಘಿಸಿ ಅಂಗಡಿ ತೆರೆದಲ್ಲಿ ಅಂಥವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು’ ಎಂದು ಎಚ್ಚರಿಸಿದರು.

ತರಕಾರಿ, ಕಿರಾಣಿ ಅಂಗಡಿ ಮತ್ತು ಔಷಧ ಅಂಗಡಿಗಳಿಗಳನ್ನು ತೆರೆದಿಡಲು ಅವಕಾಶ ಕೊಡಲಾಗಿದೆ’ ಎಂದು ತಿಳಿಸಿದರು.
ಸ್ವಯಂ ಪ್ರೇರಣೆಯಿಂದ ಅಂಗಡಿ ಬಂದ್‌ ಮಾಡಲಾಗುವುದು ಎಂದು ವ್ಯಾಪಾರಿಗಳು ಒಮ್ಮತದಿಂದ ತಿಳಿಸಿದರು. ತಹಶೀಲ್ದಾರ್‌ ಕೀರ್ತಿ ಚಾಲಕ ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು