ಬೀದರ್: ಜೂನ್28–ಜೂನ್ 31 ರವರೆಗೆ ರಾಷ್ಟ್ರೀಯ ಪಲ್ಸ್ ಪೋಲಿಯೊ ಕಾರ್ಯಕ್ರಮ ನಡೆಯಲಿದ್ದು ಯಶಸ್ಸಿಗೆ ಎಲ್ಲಾ ಇಲಾಖೆಗಳು ಸಮನ್ವಯದಿಂದ ಕೆಲಸ ಮಾಡಬೇಕು’ ಎಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಸೂಚಿಸಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜರುಗಿದ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

‘ಜಿಲ್ಲೆಯ ರೈಲು ನಿಲ್ದಾಣ, ಬಸ್ ನಿಲ್ದಾಣ, ಸಕ್ಕರೆ ಕಾರ್ಖಾನೆಗಳು, ಇಟ್ಟಿಗೆ ಭಟ್ಟಿಗಳು ಹಾಗೂ ವಲಸೆ ಕಾರ್ಮಿಕರು ವಾಸಿಸುವ ಹೈರಿಸ್ಕ್ (ಅಪಾಯದ ಅಂಚಿನಲ್ಲಿರುವ) ಪ್ರದೇಶಗಳು ಮತ್ತು ಕೊಳಚೆ ಪ್ರದೇಶಗಳ ಕಡೆಗೆ ಹೆಚ್ಚಿನ ಗಮನ ಹರಿಸಬೇಕು. ಯಾವುದೇ ಮಗು ಲಸಿಕೆಯಿಂದ ವಂಚಿತರಾಗಬಾರದು. ಮನೆ-ಮನೆ ಭೇಟಿ ಸಂದರ್ಭದಲ್ಲಿ ಯಾವುದೇ ತಪ್ಪು ಮಾಹಿತಿ ಬರದಂತೆ ಕಟ್ಟುನಿಟ್ಟಿನ ಮೇಲ್ವಿಚಾರಣೆ ನಡೆಸಬೇಕು’ ಎಂದು ಹೇಳಿದರು.

ಜಿಲ್ಲೆಯಲ್ಲಿ ಡಿಸೆಂಬರ್ 2025ರ ಒಳಗೆ ಜನಿಸಿದ 5 ವರ್ಷದೊಳಗಿನ ಒಟ್ಟು 2,13,213 ಮಕ್ಕಳಿಗೆ (ಗ್ರಾಮೀಣ ಮತ್ತು ನಗರ ಪ್ರದೇಶ ಸೇರಿ) ಪೋಲಿಯೊ ಲಸಿಕೆ ಹಾಕುವ ಗುರಿ ಹೊಂದಲಾಗಿದೆ. ಜೂನ್ 29 ರಿಂದ ಜೂನ್ 31ರವರೆಗೆ ಜಿಲ್ಲೆಯ ಒಟ್ಟು 3,35,347 ಮನೆಗಳಿಗೆ ಆರೋಗ್ಯ ಕಾರ್ಯಕರ್ತರ ತಂಡಗಳು ಭೇಟಿ ನೀಡಿ ಬಿಟ್ಟು ಹೋದ ಮಕ್ಕಳಿಗೆ ಲಸಿಕೆ ನೀಡಲಿದ್ದಾರೆ. ಲಸಿಕೆ ಕಾರ್ಯಕ್ರಮಕ್ಕಾಗಿ ಜಿಲ್ಲಾದ್ಯಂತ ಒಟ್ಟು 1077 ತಂಡಗಳನ್ನು ರಚಿಸಲಾಗಿದೆ. ಇದರಲ್ಲಿ ಜೂನ್ 28 ರಂದು 996 ಬೂತ್ಗಳು, 11 ಸಂಚಾರಿ ತಂಡಗಳು ಹಾಗೂ 70 ಟ್ರಾನ್ಸಿಟ್ ತಂಡಗಳು ಕಾರ್ಯನಿರ್ವಹಿಸಲಿವೆ. 2154 ಲಸಿಕೆದಾರರನ್ನು ಹಾಗೂ ಮೇಲ್ವಿಚಾರಣೆಗಾಗಿ 216 ಜನರನ್ನು ನಿಯೋಜಿಸಲಾಗಿದೆ ಎಂದು ತಿಳಿಸಿದರು.

ಜಿಲ್ಲಾ ಆರ್.ಸಿ.ಎಚ್. ಅಧಿಕಾರಿ ಹಾಗೂ ಪಲ್ಸ್ ಪೋಲಿಯೊ ಕಾರ್ಯಕ್ರಮದ ಜಿಲ್ಲಾ ನೋಡಲ್ ಅಧಿಕಾರಿ ಡಾ.ಶಿವಶಂಕರ ಬಿ. ಮಾತನಾಡಿ, ‘ಭಾರತ 2014ರಲ್ಲೇ ಪೋಲಿಯೊ ಮುಕ್ತ ದೇಶ ಎಂದು ಘೋಷಿಸಲ್ಪಟ್ಟಿದ್ದರೂ, ನೆರೆ ರಾಷ್ಟ್ರಗಳಾದ ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನಗಳಲ್ಲಿ ಇನ್ನೂ ಪೋಲಿಯೊ ಪ್ರಕರಣಗಳು ವರದಿಯಾಗುತ್ತಿರುವುದರಿಂದ ಮುಂಜಾಗ್ರತಾ ಕ್ರಮವಾಗಿ ಈ ಲಸಿಕಾ ಅಭಿಯಾನವನ್ನು ಹಮ್ಮಿಕೊಳ್ಳಲಾಗುತ್ತಿದೆ’ ಎಂದರು.

ಈ ಸಂದರ್ಭದಲ್ಲಿ ಬೀದರ್ ಮಹಾನಗರ ಪಾಲಿಕೆಯ ಆಯುಕ್ತ ಮುಕುಲ್ ಜೈನ್, ಜಿಲ್ಲೆಯ ಕಾರ್ಯಕ್ರಮ ಅನುಷ್ಠಾನಾಧಿಕಾರಿ ಡಾ. ರಾಜಶೇಖರ ಪಾಟೀಲ, ಡಾ. ಶಂಕ್ರೆಪ್ಪಾ ಬೊಮ್ಮಾ, ಡಾ. ಅನೀಲ ಚಿಂತಾಮಣಿ, ಡಾ. ದಿಲಿಪ್ ಡೊಂಗರೆ, ಸಾವಿತ್ರಿಬಾಯಿ, ಉಮೇಶ ಬಿರಾದರ, ಲೋಕೇಶ ಸಲಗರ, ಶಿವಶಂಕರ ಬೇಮಳಗಿ, ಗುರುನಾಥ ಕವಳೆ, ದೇವಿದಾಸ ಸೇರಿದಂತೆ ಇತರರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260528-33-1689582621

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.