ಬೀದರ್: ದಕ್ಷಿಣ ಮಧ್ಯ ರೈಲ್ವೆ ಪ್ರಧಾನ ವ್ಯವಸ್ಥಾಪಕ ಸಂಜಯ್ ಕುಮಾರ್ ಶ್ರೀವಾಸ್ತವ್ ಅವರು ಮಂಗಳವಾರ ನಗರದ ರೈಲು ನಿಲ್ದಾಣಕ್ಕೆ ಭೇಟಿ ನೀಡಿ, ನವೀಕರಣ ಕಾಮಗಾರಿಯನ್ನು ಪರಿಶೀಲಿಸಿದರು.

ಕೇಂದ್ರ ಸರ್ಕಾರದ ‘ಅಮೃತ್’ ಯೋಜನೆಯಡಿ ₹24.35 ಕೋಟಿ ಅನುದಾನದಲ್ಲಿ ರೈಲು ನಿಲ್ದಾಣದ ನವೀಕರಣ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ. 12 ಮೀಟರ್ ಅಗಲದ ಪಾದಚಾರಿ ಮೇಲ್ಸೇತುವೆ (ಎಫ್ಒಬಿ), ಲಿಫ್ಟ್, ಲೆವೆಲ್ ಕ್ರಾಸ್ ಗೇಟ್ 34 ಪರಿಶೀಲನೆ ನಡೆಸಿದರು. ನಿಲ್ದಾಣದಲ್ಲಿ ಸ್ಥಳೀಯ ಕರಕುಶಲ ವಸ್ತುಗಳ ಮಾರಾಟವನ್ನು ಪ್ರೋತ್ಸಾಹಿಸಬೇಕೆಂದು ನಿಲ್ದಾಣದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಮಹಾರಾಷ್ಟ್ರದ ಪರಳಿ ವೈಜನಾಥ, ತೆಲಂಗಾಣದ ಜಹೀರಾಬಾದ್ ಹಾಗೂ ವಿಕಾರಾಬಾದ್ ರೈಲು ನಿಲ್ದಾಣಗಳಿಗೆ ಭೇಟಿ ನೀಡಿ, ಪ್ರಯಾಣಿಕರಿಗೆ ಕಲ್ಪಿಸಲಾಗುತ್ತಿರುವ ಸೌಲಭ್ಯಗಳನ್ನು ಪರಿಶೀಲಿಸಿ, ಮಾಹಿತಿ ಪಡೆದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.