ಬೀದರ್: ಜಿಲ್ಲೆಯ ಹಲವೆಡೆ ಮಂಗಳವಾರ ಗುಡುಗು ಸಹಿತ ಬಿರುಗಾಳಿ ಮಳೆಯಾಗಿದ್ದು, ವಾತಾವರಣ ತಂಪಾಯಿತು.

ಬೆಳಿಗ್ಗೆಯಿಂದ ಸಂಜೆ 4ರ ವರೆಗೆ ಪ್ರಖರವಾದ ಬಿಸಿಲು ಇತ್ತು. ಸಂಜೆ ಗುಡುಗು, ಮಿಂಚಿನೊಂದಿಗೆ ಬಿರುಗಾಳಿ ಮಳೆ ಶುರುವಾಯಿತು.

ಬಿರುಗಾಳಿ ಮಳೆಗೆ ಬೀದರ್ ತಾಲ್ಲೂಕಿನ ಮರಕಲ್ ಗ್ರಾಮದಲ್ಲಿ ಮನೆಯ ತಗಡಿನ ಶೀಟುಗಳು ಹಾರಿ ಹೋಗಿ, ವಿದ್ಯುತ್ ತಂತಿಗಳ ಮೇಲೆ ನೇತಾಡಿದವು. ಇದರಿಂದ ವಿದ್ಯುತ್ ಸಂಪರ್ಕ ಕಡಿತಗೊಂಡಿತು. ಬಿರುಗಾಳಿ ತೀವ್ರವಾಗಿದ್ದರಿಂದ ಜನ ಹೊರಗೆ ಬರಲು ಹಿಂಜರಿದರು.

ಜಿಲ್ಲೆಯ ಭಾಲ್ಕಿ, ಕಮಲನಗರ, ಔರಾದ್ ತಾಲ್ಲೂಕಿನ ಕೆಲವು ಭಾಗಗಳಲ್ಲಿ ಮಳೆಯಾಗಿದೆ. ಪ್ರಖರ ಬಿಸಿಲಿನಿಂದ ಕಂಗೆಟ್ಟಿದ್ದ ಜನ ಮಳೆಯಿಂದ ನೆಮ್ಮದಿಯ ನಿಟ್ಟುಸಿರು ಬಿಟ್ಟರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.