ಬೀದರ್: ‘ವರನಟ ಡಾ.ರಾಜ್ಕುಮಾರ್ ಕನ್ನಡ ಉಳಿವಿಗಾಗಿ ನಡೆದಿದ್ದ ಗೋಕಾಕ್ ಚಳವಳಿಗೆ ಶಕ್ತಿ ತುಂಬಿದ್ದರು’ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಶಿವಾನಂದ ಕರಾಳೆ ಹೇಳಿದರು.

ಜಿಲ್ಲಾ ಆಡಳಿತ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಕರ್ನಾಟಕ ಸಾಹಿತ್ಯ ಸಂಘದ ವತಿಯಿಂದ ಇಲ್ಲಿಯ ಅಂಬೇಡ್ಕರ್ ವೃತ್ತದ ಬಳಿಯ ಕರ್ನಾಟಕ ಸಾಹಿತ್ಯ ಸಂಘದ ಸಾಂಸ್ಕೃತಿಕ ಭವನದಲ್ಲಿ ಡಾ.ರಾಜಕುಮಾರ್ ಅವರ 97ನೇ ಜಯಂತಿ ಅಂಗವಾಗಿ ಶುಕ್ರವಾರ ನಡೆದ ರಾಜರಸ ಸಂಗೀತ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

‘ಡಾ.ರಾಜ್ಕುಮಾರ್ ಅವರು ಗೋಕಾಕ್ ಚಳುವಳಿಗೆ ಯಾವುದೇ ಫಲಾಪೇಕ್ಷೆ ಇಲ್ಲದೆ ಸಹಕಾರ ನೀಡಿದ್ದರು. ಐತಿಹಾಸಿಕ ಚಳವಳಿಯಲ್ಲಿ ಅವರು ವಹಿಸಿದ ಪಾತ್ರ ಅನನ್ಯ’ ಎಂದು ಬಣ್ಣಿಸಿದರು.

‘ಡಾ.ರಾಜ್ಕುಮಾರ್ ಬಹುಮುಖ ಪ್ರತಿಭೆಯಾಗಿದ್ದರು. ನಟನೆ ಜತೆಗೆ ಅದ್ಭುತ ಗಾಯಕ, ಸಮಾಜ ಸೇವಕರಾಗಿಯೂ ಗುರುತಿಸಿಕೊಂಡಿದ್ದರು. ಕಲಾ ಸೇವೆಗಾಗಿ ಅನೇಕ ರಾಜ್ಯ, ರಾಷ್ಟ್ರಮಟ್ಟದ ಪ್ರಶಸ್ತಿಗೆ ಭಾಜನರಾಗಿದ್ದರು. ಅವರ ಆದರ್ಶಗಳು ಸಮಾಜಕ್ಕೆ ದಾರಿದೀಪವಾಗಿವೆ’ ಎಂದು ಹೇಳಿದರು.

ಡಾ.ರಾಜಕುಮಾರ್ ಕುರಿತು ವಿಶೇಷ ಉಪನ್ಯಾಸ ನೀಡಿದ ಜಗನ್ನಾಥ ಹೆಬ್ಬಾಳೆ ಅವರು, ‘ಡಾ.ರಾಜಕುಮಾರ್ ಅವರು ಕಲೆ ಹಾಗೂ ಸಮಾಜ ಸೇವೆ ಒಟ್ಟಿಗೆ ಮಾಡಿದ್ದರು’ ಎಂದು ತಿಳಿಸಿದರು.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕ ಮಂಜುನಾಥ ಸುಳ್ಳೊಳ್ಳಿ, ಪತ್ರಕರ್ತ ಮಾಳಪ್ಪ ಅಡಸಾರೆ, ಕರ್ನಾಟಕ ಜಾನಪದ ಅಕಾಡೆಮಿ ಸದಸ್ಯ ವಿಜಯಕುಮಾರ ಸೋನಾರೆ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ತನ್ವೀರ್ ಇಕ್ಬಾಲ್, ವಿಜಯಕೃಷ್ಣ ಸೋಲಪುರ, ಆಶೀಶ್ ಹಜಾರೆ, ಗೀತಾಬಾಯಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260425-33-1464336858

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.