ಬೀದರ್: ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಶ್ರೀ ಕೇತಕಿ ಶೈಕ್ಷಣಿಕ, ಸಾಮಾಜಿಕ ಮತ್ತು ಸಾಂಸ್ಕೃತಿ ಸಂಸ್ಥೆ ಹಾಗೂ ಹಣ್ಮುಪಾಜಿ ಗೆಳೆಯರ ಬಳಗದ ಸಹಯೋಗದಲ್ಲಿ ನಗರದಲ್ಲಿ ಸೋಮವಾರ ಸಾವಿರ ಮೀಟರ್ ಉದ್ದದ ಕರ್ನಾಟಕ ಬಾವುಟ ಹಾಗೂ ತಾಯಿ ಭುವನೇಶ್ವರಿ ಭಾವಚಿತ್ರದ ಭವ್ಯ ಮೆರವಣಿಗೆ ನಡೆಯಿತು.

ಮೆರವಣಿಗೆ ಉದ್ದಕ್ಕೂ ಕನ್ನಡ ತಾಯಿ ಭುವನೇಶ್ವರಿಗೆ ಜೈಕಾರದ ಘೋಷಣೆಗಳು ಮುಗಿಲು ಮುಟ್ಟಿದವು. ಡಿಜೆದಲ್ಲಿ ಕನ್ನಡ ಗೀತೆಗಳು ಮೊಳಗಿದವು. ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಹಾಗೂ ಇನ್ಸೈಟ್ಸ್ ಐಎಎಸ್ ತರಬೇತಿ ಕೇಂದ್ರದ ನಿರ್ದೇಶಕ ಜಿ.ಬಿ. ವಿನಯಕುಮಾರ್ ಮೆರವಣಿಗೆಗೆ ಚಾಲನೆ ನೀಡಿದರು.

ಚುನಾಯಿತ ಪ್ರತಿನಿಧಿಗಳು, ಕನ್ನಡ ಪರ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ವಿದ್ಯಾರ್ಥಿಗಳು ಹಾಗೂ ಕನ್ನಡಾಭಿಮಾನಿಗಳು ಕರ್ನಾಟಕ ಧ್ವಜ ಹಿಡಿದು ಹೆಮ್ಮೆಯಿಂದ ಸಾಗಿದರು. ಪುಷ್ಪಾಲಂಕೃತ ಸಾರೋಟಿನಲ್ಲಿ ಕನ್ನಡ ತಾಯಿ ಭುವನೇಶ್ವರಿ ಭಾವಚಿತ್ರ ಇಡಲಾಗಿತ್ತು.

ಬಿ.ವಿ.ಭೂಮರಡ್ಡಿ ಕಾಲೇಜು ಸಮೀಪದ ಕಿತ್ತೂರು ರಾಣಿ ಚನ್ನಮ್ಮ ವೃತ್ತದಿಂದ ಆರಂಭವಾದ ಮೆರವಣಿಗೆ ಬೊಮ್ಮಗೊಂಡೇಶ್ವರ ವೃತ್ತ, ಬಸವೇಶ್ವರ ವೃತ್ತ, ಭಗತ್ಸಿಂಗ್ ವೃತ್ತ, ಅಂಬೇಡ್ಕರ್ ವೃತ್ತ, ರೋಟರಿ ಕನ್ನಡಾಂಬೆ ವೃತ್ತದ ಮೂಲಕ ಹಾದು ರಂಗ ಮಂದಿರದಲ್ಲಿ ಸಮಾರೋಪಗೊಂಡಿತು.

ಶ್ರೀ ಕೇತಕಿ ಶೈಕ್ಷಣಿಕ, ಸಾಮಾಜಿಕ ಮತ್ತು ಸಾಂಸ್ಕೃತಿಕ ಸಂಸ್ಥೆಯ ಅಧ್ಯಕ್ಷ ಹಣ್ಮುಪಾಜಿ, ಪಾಲಿಕೆ ಸದಸ್ಯ ಹಣಮಂತ ಮಲ್ಕಾಪುರ, ಪ್ರಮುಖರಾದ ಶಶಿ ಪಾಟೀಲ ಚೌಳಿ, ಶ್ರೀಮಂತ ಸಪಾಟೆ, ಸೋಮಶೇಖರ ಬಿರಾದಾರ, ಪರಮೇಶ್ವರ ವಿಳಾಸಪುರೆ, ಅಭಿಷೇಕ ಮಠಪತಿ, ಓಂಪ್ರಕಾಶ ಕೋಟೆ, ಸಚಿನ್ ಶೆಟಕಾರ್, ರಮೇಶ ಬಿರಾದಾರ, ಲಕ್ಷ್ಮಿ ಬಾವುಗೆ, ಮಂಗಲಾ ಮರಕಲೆ, ಬಸವರಾಜ ಶಹಾಪುರೆ, ಸಂಗಮೇಶ ಶಹಾಪುರೆ, ಉಮೇಶ ಶಹಾಪುರೆ, ಮನ್ಮೀತ್ಸಿಂಗ್ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.