ಬೀದರ್: ‘75 ವರ್ಷ ವಯಸ್ಸು ದಾಟಿದ ಹಿರಿಯ ನಾಗರಿಕರ ಮನೆ ಬಾಗಿಲಿಗೆ ಪಡಿತರ ಧಾನ್ಯ ವಿತರಿಸಬೇಕು’ ಎಂದು ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಅಮೃತರಾವ್ ಚಿಮಕೋಡೆ ಸೂಚಿಸಿದರು.

ನಗರದ ಜಿಲ್ಲಾ ಪಂಚಾಯಿತಿಯಲ್ಲಿ ಮಂಗಳವಾರ ನಡೆದ ಐದು ಗ್ಯಾರಂಟಿ ಯೋಜನೆಗಳ ಜಿಲ್ಲಾಮಟ್ಟದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

‘ಬೇಸಿಗೆ ಕಾಲ ಇರುವುದರಿಂದ ಪಡಿತರ ಧಾನ್ಯ ವಿತರಕರು ತಮ್ಮ ಅಂಗಡಿಗಳ ಮುಂದೆ ಪಡಿತರ ಫಲಾನುಭವಿಗಳಿಗೆ ತೊಂದರೆ ಆಗದಂತೆ ಕುಡಿಯುವ ನೀರು ಮತ್ತು ನೆರಳಿನ ವ್ಯವಸ್ಥೆ ಮಾಡಬೇಕು’ ಎಂದು ತಿಳಿಸಿದರು.

‘ಗೃಹಲಕ್ಷ್ಮೀ ಯೋಜನೆಯ ಅಡಿಯಲ್ಲಿ 3,29,734 ಫಲಾನುಭವಿಗಳಿದ್ದಾರೆ. ₹1,751.40 ಕೋಟಿ ಫಲಾನುಭವಿಗಳಿಗೆ ಡಿಬಿಟಿ ಮೂಲಕ ಅವರ ಖಾತೆಗೆ ಜಮಾ ಮಾಡಲಾಗಿದೆ. ಜಿಲ್ಲೆಯಲ್ಲಿ ಒಟ್ಟು 5,353 ಮೃತ ಫಲಾನುಭವಿಗಳಿರುವುದು ಗುರುತಿಸಲಾಗಿದೆ. ಸೇವಾ ಸಿಂಧು ಲಾಗಿನ್ನಲ್ಲಿ ಇದುವರೆಗೆ 2,004 ಫಲಾನುಭವಿಗಳ ಹೆಸರು ಅಪಡೇಟ್ ಮಾಡಲಾಗಿದೆ. 3,349 ಮೃತರ ಹೆಸರು ಅಪ್ಡೇಟ್ ಮಾಡಬೇಕಿದೆ. ಈಗಾಗಲೇ ಡಿಸೆಂಬರ್ವರೆಗೆ ಗೃಹಲಕ್ಷ್ಮೀ ಹಣ ಪಾವತಿಸಲಾಗಿದ್ದು, ಜನವರಿ ತಿಂಗಳ ಹಣ ಮೂರ್ನಾಲ್ಕು ದಿನಗಳಲ್ಲಿ ಖಾತೆಗೆ ಜಮೆ ಆಗಲಿದೆ’ ಎಂದು ಹೇಳಿದರು.

‘ಶಕ್ತಿ ಯೋಜನೆಯಡಿ ಜಿಲ್ಲೆಯಲ್ಲಿ ಇದುವರೆಗೆ 11.70 ಕೋಟಿ ಮಹಿಳೆಯರು ಸಾರಿಗೆ ಸಂಸ್ಥೆ ಬಸ್ಗಳಲ್ಲಿ ಉಚಿತವಾಗಿ ಪ್ರಯಾಣಿಸಿದ್ದಾರೆ. ಜಿಲ್ಲೆಯಲ್ಲಿ ಪ್ರತಿ ದಿನ ಸರಾಸರಿ 1.16 ಲಕ್ಷ ಮಹಿಳೆಯರು ಪ್ರಯಾಣಿಸುತ್ತಿದ್ದಾರೆ. ₹3,045.88 ಕೋಟಿ ಮೊತ್ತ ಇಲಾಖೆಗೆ ಸಂದಾಯವಾಗಿರುತ್ತದೆ’ ಎಂದರು.

‘ಗೃಹಜ್ಯೋತಿ ಯೋಜನೆಯಡಿ 3,29,750 ಫಲಾನುಭವಿಗಳಿದ್ದು, ಫೆಬ್ರವರಿ ಅಂತ್ಯದವರಗೆ ₹495.80 ಕೋಟಿ ಇಲಾಖೆಗೆ ಸಂದಾಯವಾಗಿದೆ. ಯುವನಿಧಿ ಯೋಜನೆಯಡಿಯಲ್ಲಿ ಪದವಿ 16,188, ಡಿಪ್ಲೋಮಾ 408 ಫಲಾನುಭವಿಗಳು ಸೇರಿ ಒಟ್ಟು 16,596 ವಿದ್ಯಾರ್ಥಿಗಳಿಗೆ ₹40.99 ಹಣ ಖಾತೆಗೆ ಡಿಬಿಟಿ ಮೂಲಕ ಸಂದಾಯ ಮಾಡಲಾಗಿದೆ’ ಎಂದು ತಿಳಿಸಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಗಿರೀಶ್ ಬದೋಲೆ ಮಾತನಾಡಿ, ‘ಎಸ್.ಎಸ್.ಎಲ್.ಸಿ. ಪರೀಕ್ಷೆಗಳು ನಡೆಯುತ್ತಿದ್ದು, ಬಸ್ಗಳನ್ನು ಸರಿಯಾದ ಸಮಯಕ್ಕೆ ಓಡಿಸಬೇಕು. ವಿದ್ಯಾರ್ಥಿಗಳೀಗೆ ಪರೀಕ್ಷೆ ಬರೆಯಲು ತೊಂದರೆ ಆಗದಂತೆ ನೋಡಿಕೊಳ್ಳಬೇಕು’ ಎಂದು ಸಾರಿಗೆ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.

‘ಶಕ್ತಿ ಹಾಗೂ ಗೃಹಲಕ್ಷ್ಮೀ ಯೋಜನೆಗಳಲ್ಲಿ ಪ್ರತಿ ತಿಂಗಳು ಮೃತ ಫಲಾನುಭವಿಗಳ ಹೆಸರು ತೆಗೆದು ಹಾಕಬೇಕು’ ಎಂದರು. ಬಸ್ ನಿಲ್ದಾಣಗಳಲ್ಲಿ ಕುಡಿಯುವ ನೀರಿನ ಸೌಲಭ್ಯ, ಶೌಚಾಲಯ ಹಾಗೂ ಕೆಲವು ಕಡೆ ಬಸ್ ನಿಲುಗಡೆ ಸಮಸ್ಯೆಯನ್ನು ಗ್ಯಾರಂಟಿ ಸಮಿತಿ ಸದಸ್ಯರು ಸಭೆಯ ಗಮನ ಸೆಳೆದರು.

ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ಕಿಶೋರ್ ದುಬೆ, ಆಹಾರ ಇಲಾಖೆಯ ಉಪನಿರ್ದೇಶಕ ಪ್ರವೀಣ ಬರಗಲ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಶ್ರೀಧರ ಹಾಗೂ ಸಮಿತಿಯ ಪದಾಧಿಕಾರಿಗಳು ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260325-33-1755061639

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.