ಬೀದರ್: ರಾಜ್ಯ ಸರ್ಕಾರ ಮಾಡಿರುವ ಒಳ ಮೀಸಲಾತಿ ಹಂಚಿಕೆಯನ್ನು ಕಾಂಗ್ರೆಸ್ ಕಿಸಾನ್ ವಿಭಾಗದ ರಾಷ್ಟ್ರೀಯ ಜಂಟಿ ಸಂಯೋಜಕ ಜಾನಸನ್ ಘೋಡೆ ಸ್ವಾಗತಿಸಿದ್ದಾರೆ.

ಪರಿಶಿಷ್ಟ ಜಾತಿಗಳಿಗೆ ಲಭ್ಯವಿರುವ ಶೇ 15ರಷ್ಟು ಮೀಸಲಾತಿಯಲ್ಲಿ ಎಡಗೈ ಸಮುದಾಯಕ್ಕೆ ಶೇ 5.25, ಬಲಗೈ ಸಮುದಾಯಕ್ಕೆ ಶೇ 5.25 ಹಾಗೂ ಇತರರಿಗೆ ಶೇ 4.5ರಷ್ಟು ಮೀಸಲಾತಿ ಹಂಚಿಕೆ ಮಾಡಿರುವುದು ಸೂಕ್ತವಾಗಿದೆ ಎಂದು ತಿಳಿಸಿದ್ದಾರೆ.

ಒಳ ಮೀಸಲಾತಿ ಜಾರಿ ವಿಚಾರದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ಬದ್ಧತೆ ಪ್ರದರ್ಶಿಸಿದೆ. ಶೀಘ್ರ ನೇಮಕಾತಿ ಪ್ರಕ್ರಿಯೆಗೂ ಚಾಲನೆ ಕೊಡುವ ವಿಶ್ವಾಸವಿದೆ. ಇದರಿಂದ ಪರಿಶಿಷ್ಟರೆಲ್ಲರಿಗೂ ಒಳಿತಾಗಲಿದೆ ಎಂದು ಹೇಳಿದ್ದಾರೆ.

ಡಾ.ಬಿ.ಆರ್. ಅಂಬೇಡ್ಕರ್ ಅವರು ಹೇಳಿದಂತೆ ಪರಿಶಿಷ್ಟ ಸಮುದಾಯಗಳು ಕಲಹ ಮಾಡದೆ, ಒಗ್ಗಟ್ಟಿನಿಂದ ಇರಬೇಕು. ಸಂವಿಧಾನದ ಆಶಯಕ್ಕೆ ಅನುಗುಣವಾಗಿ ಬದುಕು ಕಟ್ಟಿಕೊಳ್ಳಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260426-33-2134119046

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.