ಬೀದರ್: ಡಾ.ಬಿ.ಆರ್. ಅಂಬೇಡ್ಕರ್ ಜಯಂತಿ ಅಂಗವಾಗಿ ನಗರದಲ್ಲಿ ಶುಕ್ರವಾರ ಏರ್ಪಡಿಸಿದ್ದ ‘ರನ್ ಫಾರ್ ಅಂಬೇಡ್ಕರ್, ರನ್ ಫಾರ್ ಕಾನ್ಸ್ಟಿಟ್ಯೂಶನ್’ ಕಾರ್ಯಕ್ರಮಕ್ಕೆ ಉತ್ತಮ ಸ್ಪಂದನೆ ವ್ಯಕ್ತವಾಯಿತು.

ದಲಿತ ವಿದ್ಯಾರ್ಥಿ ಸಂಘ, ದಲಿತ ವಿದ್ಯಾರ್ಥಿ ಪರಿಷತ್ತು, ವಿವಿಧ ದಲಿತ ಸಂಘಟನೆಗಳ ಒಕ್ಕೂಟ ಹಾಗೂ ಸಂವಿಧಾನ ಸಂರಕ್ಷಣಾ ಸಮಿತಿ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಓಟಕ್ಕೆ ಉತ್ತಮ ಪ್ರತಿಕ್ರಿಯೆ ದೊರೆಯಿತು.

ನಗರದ ಬರೀದ್ ಷಾಹಿ ಉದ್ಯಾನದಿಂದ ಆರಂಭಗೊಂಡ ಓಟ ಗುರುದ್ವಾರ ಕಮಾನ್, ಮಡಿವಾಳೇಶ್ವರ ವೃತ್ತ, ನೆಹರೂ ಕ್ರೀಡಾಂಗಣದ ಮೂಲಕ ಹಾದು ಡಾ.ಬಿ.ಆರ್. ಅಂಬೇಡ್ಕರ್ ವೃತ್ತದಲ್ಲಿ ಕೊನೆಗೊಂಡಿತು. ಮಹಿಳೆಯರು, ಮಕ್ಕಳು ಸೇರಿದಂತೆ ಎಲ್ಲ ವಯೋಮಾನದವರು ಓಡಿದರು. ನೀಲಿ ಧ್ವಜ ಬೀಸುತ್ತ, ಅಂಬೇಡ್ಕರ್ ಅವರ ಭಾವಚಿತ್ರ ಹಿಡಿದುಕೊಂಡು, ಜಯಘೋಷ ಹಾಕುತ್ತ ಹೆಜ್ಜೆ ಹಾಕಿದರು. ಸಂಗೀತದ ತಾಳಕ್ಕೆ ಕುಣಿದು ಕುಪ್ಪಳಿಸಿದರು.

ಇದಕ್ಕೂ ಮುನ್ನ ಬರೀದ್ ಷಾಹಿ ಉದ್ಯಾನದ ಎದುರು ಸಂಸದ ಸಾಗರ್ ಖಂಡ್ರೆ ಚಾಲನೆ ನೀಡಿದರು. ಬಳಿಕ ಮಾತನಾಡಿ, ಪ್ರತಿಯೊಬ್ಬರೂ ಈ ದೇಶದ ಸಂವಿಧಾನವನ್ನು ಚೆನ್ನಾಗಿ ಓದಿ ಅರ್ಥೈಸಿಕೊಳ್ಳಬೇಕು. ಕಾನೂನಿನ ಬಗ್ಗೆ ಆಳವಾಗಿ ಅಧ್ಯಯನ ಮಾಡಿ ತಿಳಿದುಕೊಳ್ಳಬೇಕು. ಇಂಥ ಕಾರ್ಯಕ್ರಮದ ಮೂಲಕ ಸಂವಿಧಾನದ ಬಗ್ಗೆ ತಿಳಿಯಲು ನೆರವಾಗಲಿದೆ ಎಂದು ತಿಳಿಸಿದರು.

ಪೌರಾಡಳಿತ ಸಚಿವ ರಹೀಂ ಖಾನ್ ಮಾತನಾಡಿ, ಈ ದೇಶದ ಸಂವಿಧಾನದಿಂದ ಈ ದೇಶದ ಎಲ್ಲ ಪ್ರಜೆಗಳಿಗೂ ಸಮಾನ ಅವಕಾಶಗಳು ದೊರೆತಿವೆ. ಅದರ ಮಹತ್ವ ಎಷ್ಟಿದೆ ಎಂಬುದು ಇದರಿಂದ ಗೊತ್ತಾಗುತ್ತದೆ ಎಂದರು.

ನಾರಂಜಾ ಸಹಕಾರ ಸಕ್ಕರೆ ಕಾರ್ಖಾನೆಯ ಅಧ್ಯಕ್ಷ ಸೂರ್ಯಕಾಂತ ನಾಗಮಾರಪಳ್ಳಿ ಮಾತನಾಡಿ, ಸಂವಿಧಾನ ಎಂದರೆ ಸಾಮಾಜಿಕ ನ್ಯಾಯದ ಪ್ರತೀಕ. ಅದರ ತತ್ವಾದರ್ಶಗಳು, ಸಿದ್ಧಾಂತಗಳನ್ನು ಪ್ರತಿಯೊಬ್ಬರೂ ಅರ್ಥೈಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಪ್ರಮುಖರಾದ ಅನಿಲ್ ಕುಮಾರ್ ಬೆಲ್ದಾರ್, ರಮೇಶ್ ಡಾಕುಳಗಿ, ಬಾಬುರಾವ್ ಪಾಸ್ವಾನ್, ಶಿವಕುಮಾರ್ ನೀಲಿಕಟ್ಟಿ, ಪ್ರದೀಪ್ ನಾಟೇಕರ್, ಶ್ರೀಪತರಾವ್ ದೀನೆ, ಸಂದೀಪ್ ಕಾಂಟೆ, ವಿಠ್ಠಲದಾಸ್ ಪ್ಯಾಗೆ, ಪಂಡಿತ್ ಚಿದ್ರಿ, ಓಂಪ್ರಕಾಶ ರೊಟ್ಟೆ, ಮಹೇಶ ಗೋರನಾಳಕರ್, ವಿನಯ್ ಕುಮಾರ್ ಮಾಳಗೆ ಮತ್ತಿತರರು ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260411-33-654297025

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.