ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೀದರ್: ಮೂವರು ನ್ಯಾಯಾಧೀಶರಿಗೆ ಬೀಳ್ಕೊಡುಗೆ

Published 16 ಮೇ 2024, 14:01 IST
Last Updated 16 ಮೇ 2024, 14:01 IST
ಅಕ್ಷರ ಗಾತ್ರ

ಬೀದರ್: ಜಿಲ್ಲಾ ನ್ಯಾಯಾಲಯದಿಂದ ಬೇರೆ ನ್ಯಾಯಾಲಯಗಳಿಗೆ ವರ್ಗಾವಣೆಗೊಂಡ ಮೂವರು ನ್ಯಾಯಾಧೀಶರನ್ನು ನಗರದ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಇರುವ ವಕೀಲರ ಸಂಘದ ಕಚೇರಿಯಲ್ಲಿ ಗುರುವಾರ ಸನ್ಮಾನಿಸಿ ಬೀಳ್ಕೊಡಲಾಯಿತು.

ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶ ಗಂಗಾಧರ ಹಡಪದ, ಹೆಚ್ಚುವರಿ ಸಿವಿಲ್ ನ್ಯಾಯಾಧೀಶ ಅಬ್ದುಲ್ ಖಾದರ್ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ಎಸ್.ಕೆ. ಕನಕಟ್ಟೆ ಅವರನ್ನು ಸಂಘದ ಪದಾಧಿಕಾರಿಗಳು ಮೈಸೂರು ಪೇಟ ತೊಡಿಸಿ, ಶಾಲು ಹೊದಿಸಿ, ಸ್ಮರಣಿಕೆ ನೀಡಿ ಗೌರವಿಸಿದರು.

ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಸಚಿನ್ ಕೌಶಿಕ್, ಪ್ರಧಾನ ಸಿವಿಲ್ ನ್ಯಾಯಾಧೀಶ ಕಾಡಪ್ಪ ಹುಕ್ಕೇರಿ, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಶಿವಶರಣಪ್ಪ ಪಾಟೀಲ, ಉಪಾಧ್ಯಕ್ಷ ಗುಂಡು ರೆಡ್ಡಿ, ಪ್ರಧಾನ ಕಾರ್ಯದರ್ಶಿ ನಾಗೇಂದ್ರ ಬಿರಾದಾರ, ಜಂಟಿ ಕಾರ್ಯದರ್ಶಿ ಶಿಲ್ಪಾ ಪಾಟೀಲ, ಖಜಾಂಚಿ ಪ್ಯಾರೂ ಸಾಬ್ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT