ಬುಧವಾರ, 17 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಬೀದರ್‌: ಶಿಕ್ಷಕನಿಂದ ವಿದ್ಯಾರ್ಥಿನಿಗೆ ಲೈಂಗಿಕ ದೌರ್ಜನ್ಯ

ಕಮಲನಗರದಲ್ಲಿ ಪ್ರೌಢ ಶಾಲೆಯ ಶಿಕ್ಷಕ ಒಂಬತ್ತನೇ ತರಗತಿಯ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾನೆ.
Published 1 ಜುಲೈ 2024, 12:12 IST
Last Updated 1 ಜುಲೈ 2024, 12:12 IST
ಅಕ್ಷರ ಗಾತ್ರ

ಬೀದರ್‌: ಜಿಲ್ಲೆಯ ಕಮಲನಗರದಲ್ಲಿ ಪ್ರೌಢ ಶಾಲೆಯ ಶಿಕ್ಷಕ ಒಂಬತ್ತನೇ ತರಗತಿಯ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾನೆ.

ರಾಜ್ಯ ಮಕ್ಕಳ ಹಕ್ಕುಗಳ ಆಯೋಗವು ಘಟನೆಯನ್ನು ಗಂಭೀರವಾಗಿ ಪರಿಗಣಿಸಿ, ಸ್ವಯಂಪ್ರೇರಿತವಾಗಿ ಪ್ರಕರಣವನ್ನು ದಾಖಲಿಸಿಕೊಂಡಿದೆ.

‘ಡಿಡಿಪಿಐ ಹಾಗೂ ಕಮಲನಗರ ಡಿವೈಎಸ್ಪಿ ಜೊತೆ ಮಾತನಾಡಿದ್ದೇನೆ. ಪ್ರಕರಣ ದಾಖಲಿಸುವಂತೆ ತಿಳಿಸಲಾಗಿದೆ’ ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶಶಿಧರ ಕೋಸಂಬೆ ತಿಳಿಸಿದ್ದಾರೆ.

ವಿದ್ಯಾರ್ಥಿನಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಶಿಕ್ಷಕನ ಮೇಲೆ ಸೂಕ್ತ ಕ್ರಮ ಕೈಗೊಂಡು ಆಯೋಗಕ್ಕೆ ಮಾಹಿತಿ ನೀಡಬೇಕು. ಜಿಲ್ಲೆಯ ಅನೇಕ ಕಡೆಗಳಲ್ಲಿ ಮಕ್ಕಳ ಹಕ್ಕುಗಳ ಕಾಯ್ದೆ, ಪೋಕ್ಸೋ ಕಾಯ್ದೆ, ಬಾಲ ನ್ಯಾಯ ಕಾಯ್ದೆ ಕುರಿತು ಜಾಗೃತಿ ಮೂಡಿಸಿದರೂ ಇಂತಹ ಪ್ರಕರಣಗಳು ನಡೆಯುತ್ತಿರುವುದು ದುರದೃಷ್ಟಕರ ಎಂದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT