‘ಗುತ್ತಿಗೆ ಆಧಾರದಲ್ಲಿ ಕೆಲಸ ನಿರ್ವಹಿಸುತ್ತಿರುವ ವಾರ್ಡನ್ ದೂರು ನೀಡಿದ್ದಾರೆ. ಅಶೋಕರೆಡ್ಡಿ ಎರಡು ವರ್ಷಗಳಿಂದ ಲೈಂಗಿಕ ಕಿರುಕುಳ ನೀಡುತ್ತಿದ್ದ. ಹಣದ ಆಮಿಷ ತೋರಿಸಿ ಅಸಭ್ಯವಾಗಿ ವರ್ತಿಸುತ್ತಿದ್ದ. ಅಶ್ಲೀಲವಾಗಿ ಮಾತನಾಡಿದ್ದು, ಈ ಬಗ್ಗೆ ಯಾರಿಗಾದರೂ ಹೇಳಿದರೆ ಕೆಲಸದಿಂದ ತೆಗೆದು ಹಾಕುವುದಾಗಿ ಬೆದರಿಕೆ ಒಡ್ಡಿದ್ದಾನೆ’ ಎಂದು ದೂರಿನಲ್ಲಿ ಆರೋಪಿಸಲಾಗಿದೆ.