ಗುರುವಾರ , ಏಪ್ರಿಲ್ 2, 2020
19 °C

ತನಿಖಾ ಅಧಿಕಾರಿ ಮುಂದೆ ಹಾಜರಾದ ಅಬ್ದುಲ್‌ ಖದೀರ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೀದರ್: ಶಾಹೀನ್‌ ಶಾಲಾ ಮಕ್ಕಳು ಪ್ರದರ್ಶಿಸಿದ ವಿವಾದಾತ್ಮಕ ನಾಟಕಕ್ಕೆ ಸಂಬಂಧಿಸಿದಂತೆ ದೇಶದ್ರೋಹ ಪ್ರಕರಣ ದಾಖಲಾದ ನಂತರ ಸೌದಿ ಅರೇಬಿಯಾಕ್ಕೆ ತೆರಳಿದ್ದ ಶಾಹೀನ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಅಬ್ದುಲ್ ಖದೀರ್‌ ಗುರುವಾರ ಬೆಳಗಿನ ಜಾವ ನಗರಕ್ಕೆ ಬಂದು ಪೊಲೀಸ್‌ ತನಿಖಾ ಅಧಿಕಾರಿಯ ಮುಂದೆ ಹಾಜರಾದರು.

ಅಬ್ದುಲ್‌ ಖದೀರ್‌ ಅವರು ತನಿಖಾ ಅಧಿಕಾರಿಗಳು ಕೇಳಿದ ಎಲ್ಲ ಪ್ರಶ್ನೆಗಳಿಗೆ ಸಂಯಮದಿಂದ ಉತ್ತರಿಸಿದರು.
ಜಿಲ್ಲಾ ಪ್ರಧಾನ ಹಾಗೂ ಸೆಷನ್ಸ್‌ ನ್ಯಾಯಾಲಯವು ಮಾ.3ರಂದು ನೀಡಿದ ನಿರೀಕ್ಷಣಾ ಜಾಮೀನು ನಂತರದ ಪ್ರಕ್ರಿಯೆಗಳನ್ನು ಪೊಲೀಸರು ಪೂರ್ಣಗೊಳಿಸಿದರು. ಮೂವರು ಗಣ್ಯರ ಶ್ಯೂರಿಟಿ ಹಾಗೂ ಮುಚ್ಚಳಿಕೆಯನ್ನು ಬರೆಯಿಸಿಕೊಂಡರು.

ಇದಕ್ಕೂ ಮೊದಲು ಬೀದರ್‌ ಪೊಲೀಸರ ತಂಡವು ಮುಂಬೈ ವಿಮಾನ ನಿಲ್ದಾಣ ಪ್ರಾಧಿಕಾರಕ್ಕೆ ನ್ಯಾಯಾಲಯದ ಆದೇಶ ಪ್ರತಿ ಹಾಗೂ ಲುಕ್‌ಔಟ್ ನೋಟಿಸ್ ರದ್ದುಪಡಿಸುವ ಪತ್ರವನ್ನು ಸಲ್ಲಿಸಿತು. ಪ್ರಾಧಿಕಾರದ ಅಧಿಕಾರಿಗಳು ನಿರ್ಬಂಧ ತೆರವುಗೊಳಿಸಿದ ನಂತರ ಪೊಲೀಸ್‌ ಅಧಿಕಾರಿಗಳು ಅಬ್ದುಲ್ ಖದೀರ್ ಅವರೊಂದಿಗೆ ವಿಮಾನದ ಮೂಲಕ ಹೈದರಾಬಾದ್‌ಗೆ ಬಂದರು. ಅಲ್ಲಿಂದ ನೇರವಾಗಿ ಅವರನ್ನು ನಗರದ ಡಿವೈಎಸ್‌ಪಿ ಕಚೇರಿಗೆ ಕರೆ ತಂದು ಕೆಲ ಮಾಹಿತಿ ಪಡೆದ ನಂತರ ಮನೆಗೆ ಕಳಿಸಿದರು ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು