ಶನಿವಾರ, ಜೂನ್ 19, 2021
27 °C
ಶಾಹೀನ್‌ ಶಾಲೆ: ವಿವಾದಾತ್ಮಕ ನಾಟಕ ಪ್ರಕರಣ

ಬೀದರ್ | ಶಾಹೀನ್ ಶಾಲೆ ವಿವಾದಾತ್ಮಕ ನಾಟಕ ಪ್ರಕರಣ: ಜಾಮೀನು ಕೋರಿ ಅರ್ಜಿ ಸಲ್ಲಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೀದರ್‌: ಶಾಹೀನ್ ಪ್ರಾಥಮಿಕ ಶಾಲೆಯಲ್ಲಿ ವಿವಾದಾತ್ಮಕ ನಾಟಕ ಪ್ರದರ್ಶಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಹೀನ್ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿ ಪದಾಧಿಕಾರಿಗಳು ಇಲ್ಲಿಯ ಪ್ರಧಾನ ಸಿವಿಲ್‌ ಹಾಗೂ ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ.

ಶಾಹೀನ್ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿ ಪರ ವಕೀಲ ಕೇಶವ ಶ್ರೀಮಾಳೆ ಅವರು ನಿರೀಕ್ಷಣಾ ಜಾಮೀನು ಷರತ್ತಿನ ಪ್ರಕಾರ ಬುಧವಾರ ಸಲ್ಲಿಸಿದ ಅರ್ಜಿಯನ್ನು ನ್ಯಾಯಾಲಯ ಸ್ವೀಕರಿಸಿದೆ. ಆಕ್ಷೇಪಣೆ ಸಲ್ಲಿಸುವಂತೆ ಸರ್ಕಾರಿ ವಕೀಲರಿಗೆ ಸೂಚಿಸಿದೆ.

ಪೊಲೀಸರು ನ್ಯಾಯಾಲಯಕ್ಕೆ ಎಫ್‌ಐಆರ್‌ ಪ್ರತಿ ಮಾತ್ರ ಒದಗಿಸಿದ್ದು, ದೋಷಾರೋಪಣಾ ಪಟ್ಟಿ ಸಲ್ಲಿಸಿಲ್ಲ. ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ಪ್ರಕ್ರಿಯೆ ಪೂರ್ಣಗೊಂಡ ನಂತರ ದೇಶದ್ರೋಹ ಪ್ರಕರಣದ ವಿಚಾರಣೆ ಜಿಲ್ಲಾ ಪ್ರಧಾನ ಹಾಗೂ ಸೆಷನ್ಸ್‌ ನ್ಯಾಯಾಲಯದಲ್ಲಿ ಆರಂಭವಾಗುವ ಸಾಧ್ಯತೆ ಇದೆ.

ಶಾಹೀನ್‌ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಅಬ್ದುಲ್‌ ಖದೀರ್‌ ಹಾಗೂ ಆಡಳಿತ ಮಂಡಳಿ ಪದಾಧಿಕಾರಿಗಳಿಗೆ ಮಾರ್ಚ್ 3ರಂದು ಜಿಲ್ಲಾ ಪ್ರಧಾನ ಹಾಗೂ ಸೆಷನ್ಸ್‌ ನ್ಯಾಯಾಲಯ ನಿರೀಕ್ಷಣಾ ಜಾಮೀನು ನೀಡಿದೆ.

ಶಾಹೀನ್‌ ಶಿಕ್ಷಣ ಸಂಸ್ಥೆಯ ಪ್ರಮುಖರಾದ ಹಕ್‌ ಕಾಲೊನಿಯ ಅಲ್ಲಾವುದ್ದೀನ್‌ ಸಯ್ಯದ್‌ ಪಾಶಾ ಹುಸೇನಿ, ಅಬ್ದುಲ್‌ ಖಾಲಿಕ್‌ ಅಬ್ದುಲ್‌ ರಜಾಕ್, ಸಿದ್ಧಿ ತಾಲೀಂನ ಮಹಮ್ಮದ್‌ ಬಿಲ್ಲಾ ಇನಾಮದಾರ್ ಗುಲಾಂನಬಿ ಇನಾಮದಾರ್, ಗೋಲೆಖಾನಾದ ಮಹಮ್ಮದ್‌ ಮೆಹತಾಬ್ ಮಹಮ್ಮದ್‌ ಅಬ್ದುಲ್‌ ಕರೀಂ ಪರವಾಗಿ ಜಾಮೀನು ಅರ್ಜಿ ಸಲ್ಲಿಸಲಾಗಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು