ಬೀದರ್: ಇಲ್ಲಿನ ಶಿವನಗರದ ವಾಕಿಂಗ್ ಟ್ರ್ಯಾಕ್ ಕಾಮಗಾರಿ ಬೇಗ ಪೂರ್ಣಗೊಳಿಸಬೇಕೆಂದು ಸ್ಥಳೀಯ ನಿವಾಸಿಗಳು ಆಗ್ರಹಿಸಿದ್ದಾರೆ.

ಈ ಸಂಬಂಧ ಸ್ಥಳೀಯರು ಬುಧವಾರ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಹಾಗೂ ಜಿಲ್ಲಾ ನಗರಾಭಿವೃದ್ಧಿ ಕೋಶದ ಅಧಿಕಾರಿ ಅರುಣಕುಮಾರ ಅವರಿಗೆ ಮನವಿ ಪತ್ರ ಸಲ್ಲಿಸಿ ಒತ್ತಾಯಿಸಿದ್ದಾರೆ.

ಚರಂಡಿ ಹಾಗೂ ಫುಟ್ಪಾತ್ ನಿರ್ಮಾಣ ಕಾಮಗಾರಿ ಆಮೆಗತಿಯಲ್ಲಿ ನಡೆಯುತ್ತಿದೆ. ಇನ್ನೇನು ಜೂನ್ನಲ್ಲಿ ಮಳೆಗಾಲ ಆರಂಭವಾಗುತ್ತದೆ. ಅಷ್ಟರೊಳಗೆ ಕಾಮಗಾರಿ ಪೂರ್ಣಗೊಳ್ಳದಿದ್ದಲ್ಲಿ ಮತ್ತೆ ಹಿಂದೆ ಬೀಳುತ್ತದೆ. ಈಗಾಗಲೇ ವಾಯುವಿಹಾರಿಗಳಿಗೆ ವಾಕಿಂಗ್ ಮಾಡಲು ಸಮಸ್ಯೆ ಎದುರಿಸುತ್ತಿದ್ದಾರೆ. ಜಿಲ್ಲಾಡಳಿತವು ಗುಣಮಟ್ಟದ ಕಾಮಗಾರಿಯನ್ನು ಶೀಘ್ರ ಮುಗಿಸಬೇಕು. ಇಲ್ಲವಾದಲ್ಲಿ ರಸ್ತೆತಡೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

ಸ್ಥಳೀಯರಾದ ಅಶೋಕ ಕುಮಾರ ಕರಂಜಿ, ಪ್ರಭುಶೆಟ್ಟಿ ಮೂಲಗೆ, ಬಸವರಾಜ ನೇಕಾರ, ರವಿ ಕಿರಣ ಪಬ್ಬಾ, ಮಲ್ಲಿಕಾರ್ಜುನ ಚೆಲುವಾ, ಅನಿಲ್ ಕುಮಾರ್ ಬೆಲ್ದಾರ್, ಮನೋಹರ ಪಾಟೀಲ್ ಶ್ರೀಮಂಡಲ್, ರಾಜೇಂದ್ರ ಚಿಂತಲಗೇರಾ, ಎಸ್.ಎನ್. ಬಿರಾದಾರ, ವೀರಭದ್ರಪ್ಪ ಭುಯ್ಯಾ, ಅಶೋಕ ಅಂಬಾಟೆ, ಸಂಜೀವ ರೆಡ್ಡಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260514-33-1159748574

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.