ಶ್ರೀಮಂಡಲ್(ಜನವಾಡ): ‘ಆರೋಗ್ಯ ಸಮಸ್ಯೆಯನ್ನು ಯಾವುದೇ ಕಾರಣಕ್ಕೂ ನಿರ್ಲಕ್ಷಿಸಬಾರದು’ ಎಂದು ಭಾರತೀಯ ವೈದ್ಯಕೀಯ ಸಂಘದ ಅಧ್ಯಕ್ಷ ಡಾ. ವಿಜಯ್ ಬಲ್ಲೂರಕರ್ ಸಲಹೆ ನೀಡಿದರು.

ಬೀದರ್ ತಾಲ್ಲೂಕಿನ ಶ್ರೀಮಂಡಲ್ ಗ್ರಾಮದಲ್ಲಿ ವಿಶ್ವ ಆರೋಗ್ಯ ದಿನಾಚರಣೆ ಅಂಗವಾಗಿ ರೋಟರಿ ಕ್ಲಬ್ ಬೀದರ್ ಫೋರ್ಟ್, ಹ್ಯಾಪಿ ವಾಕಿಂಗ್ ಟೀಮ್ ಹಾಗೂ ಭಾರತೀಯ ವೈದ್ಯಕೀಯ ಸಂಘದಿಂದ ಮಂಗಳವಾರ ಆಯೋಜಿಸಿದ್ದ ಆರೋಗ್ಯ ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಗ್ರಾಮೀಣ ಪ್ರದೇಶದಲ್ಲೂ ಉತ್ತಮ ವೈದ್ಯಕೀಯ ಸೌಲಭ್ಯಗಳು ಇವೆ. ಸಾರ್ವಜನಿಕರು ಸರ್ಕಾರಿ ಆಸ್ಪತ್ರೆಗಳ ಪ್ರಯೋಜನ ಪಡೆಯಬೇಕು. ಉತ್ತಮ ಆರೋಗ್ಯ ಕಾಯ್ದುಕೊಳ್ಳಲು ಹಣ್ಣು ಹಾಗೂ ಪೌಷ್ಠಿಕ ಆಹಾರ ಸೇವಿಸಬೇಕು ಎಂದರು. ಡಾ. ಸುಭಾಷ್ ಕರ್ಪೂರ, ಪತ್ರಕರ್ತ ಅಶೋಕಕುಮಾರ ಕರಂಜಿ ಮಾತನಾಡಿದರು.

ಹಿರಿಯರು ಹಾಗೂ ಮಹಿಳೆಯರಿಗೆ ಉಚಿತ ಔಷಧಿ ವಿತರಿಸಲಾಯಿತು. ರೋಟರಿ ಕ್ಲಬ್ ಬೀದರ್ ಫೋರ್ಟ್ ಅಧ್ಯಕ್ಷ ಡಾ. ಉಲ್ಲಾಸ್ ಕಟ್ಟಿಮನಿ, ಡಾ. ಸುಭಾಷ್ ಬಶೆಟ್ಟಿ, ಗ್ರಾಮ ಪಂಚಾಯಿತಿ ಅಧ್ಯಕ್ಷ ಮಂಜುನಾಥ, ಶಿವರಾಜ ಮಾಡಗಿ, ಆನಂದಕುಮಾರ ಪಬ್ಬ, ಪಂಡಿತ ಶಂಭು, ಸತೀಶ್ ಮಂಠಾಳೆ, ಮಲ್ಲಿಕಾರ್ಜುನ ಚಲುವಾ, ಅಶೋಕ ಅಂಬಾಟೆ, ಶಾಂತವೀರ ಪಾಟೀಲ, ಬಸವರಾಜ ನೇಕಾರ್, ಮಲ್ಲಿಕಾರ್ಜುನ ರಾಗಾ, ಮನೋಹರ ಪಾಟೀಲ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260409-33-2043711792

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.