ಹುಮನಾಬಾದ್: ‘ಬೀದರ್ ಸಹಕಾರ ಸಕ್ಕರೆ ಕಾರ್ಖಾನೆ ಪುನರಾರಂಭ ಮಾಡಲು ಮಾಜಿ ಸಚಿವ ರಾಜಶೇಖರ ಪಾಟೀಲ ವಿಳಂಬ ಧೋರಣೆ ಅನುಸರಿಸುತ್ತಿರುವುದು ಸರಿಯಲ್ಲ’ ಎಂದು ಬಿ.ಎಸ್.ಎಸ್.ಕೆ ಕಾರ್ಖಾನೆ ಹಿತರಕ್ಷಣಾ ಸಮಿತಿ ಅಧ್ಯಕ್ಷ ಸುಭಾಷ್ ಗಂಗಾ ಹೇಳಿದರು.

ಪಟ್ಟಣದಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಬಿಎಸ್ಎಸ್ಕೆ ಕಾರ್ಖಾನೆಯನ್ನು ಡಿಸಿಸಿ ಬ್ಯಾಂಕ್ ಈ ಹಿಂದೆ ಟೆಂಡರ್ ಕರೆದಾಗ ನಾನು ಖರೀದಿಸಿದ್ದೆ. ಆದರೆ ಮಾಜಿ ಸಚಿವ ರಾಜಶೇಖರ ಪಾಟೀಲ ಅವರು ಜಿಲ್ಲೆಯ ಜನಪ್ರತಿನಿಧಿಗಳ ನಿಯೋಗವನ್ನು ಮುಖ್ಯಮಂತ್ರಿ ಮತ್ತು ಸಕ್ಕರೆ ಸಚಿವರ ಹತ್ತಿರ ಕರೆದುಕೊಂಡು ಹೋಗಿ ವಿಶೇಷ ಸಭೆ ಮಾಡಿ, ಈ ಟೆಂಡರ್ ಪ್ರಕ್ರಿಯೆ ತಡೆದು, ಸರ್ಕಾರದಿಂದ ಕಾರ್ಖಾನೆ ಆರಂಭ ಮಾಡುತ್ತೇವೆ ಎಂದು ಭರವಸೆ ನೀಡಿದರು ಎಂದರು.

‘ಆದರೆ ಈಗ ಮತ್ತೆ ಡಿಸಿಸಿ ಬ್ಯಾಂಕ್ ಜೂನ್ ಅಥವಾ ಜುಲೈ ತಿಂಗಳಲ್ಲಿ ಟೆಂಡರ್ ಕರೆಯಲಿದೆ. ಹೀಗಾಗಿ ನಿಮ್ಮ ಭರವಸೆ ಸುಳ್ಳಾಗಿದೆ. ವಿಳಂಬ ಮಾಡದೆ ನೀಡಿದ ಭರವಸಯಂತೆ ಕಾರ್ಖಾನೆ ಆರಂಭ ಮಾಡಲು ಪ್ರಯತ್ನಿಸಿ. ಇಲ್ಲದಿದ್ದರೆ ಕಾರ್ಖಾನೆ ಪುನಶ್ಚೇತನದ ಬಗ್ಗೆ ನಿಮ್ಮ ನಿಲುವು ಕ್ಷೇತ್ರದ ಜನರಿಗೆ ಸ್ಪಷ್ಟ ಪಡಿಸಬೇಕು’ ಎಂದರು.

ಹುಮನಾಬಾದ್ ಕ್ಷೇತ್ರದ ಜನರು ನಿಮಗೆ 4 ಬಾರಿ ಶಾಸಕರಾಗಿ, ಸಚಿವರಾಗಿ ಆಯ್ಕೆ ಮಾಡಿದ್ದಾರೆ. ಈ ಕ್ಷೇತ್ರದ ಜನರ ಋಣ ನಿಮ್ಮ ಮೇಲಿದೆ. ಅವರ ಋಣ ತೀರಿಸುವ ಅವಕಾಶ ನಿಮಗೆ ಈಗ ಬಂದಿದೆ. ಆದರಿಂದ ಮುಖ್ಯಮಂತ್ರಿ ಮತ್ತು ಸಕ್ಕರೆ ಸಚಿವರನ್ನು ಭೇಟಿಯಾಗಿ ಕಾರ್ಖಾನೆ ಆರಂಭಕ್ಕೆ ಅನುದಾನ ತರಬೇಕು ಎಂದು ಆಗ್ರಹಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260526-33-1958782359

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.