ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿವೇಕಾನಂದ ತತ್ವದಿಂದ ಭಾರತ ಸಮೃದ್ಧ: ದೀಪಕ್ ಮನ್ನಳ್ಳಿ ಅಭಿಮತ

Last Updated 13 ಜನವರಿ 2022, 12:12 IST
ಅಕ್ಷರ ಗಾತ್ರ

ಮನ್ನಳ್ಳಿ (ಜನವಾಡ): ಸ್ವಾಮಿ ವಿವೇಕಾನಂದ ಅವರ ತತ್ವಗಳ ಪಾಲನೆಯಿಂದ ಸಮೃದ್ಧ ಭಾರತ ಕಟ್ಟಲು ಸಾಧ್ಯವಿದೆ ಎಂದು ಜ್ಞಾನ ಸಂಗಮ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ದೀಪಕ್ ನಾರಾಯಣರಾವ್ ಮನ್ನಳ್ಳಿ ಹೇಳಿದರು.

ಬೀದರ್ ತಾಲ್ಲೂಕಿನ ಮನ್ನಳ್ಳಿ ಗ್ರಾಮದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಯೋಜಿಸಿದ್ದ ಸ್ವಾಮಿ ವಿವೇಕಾನಂದ ಜಯಂತಿ ಹಾಗೂ ರಾಷ್ಟ್ರೀಯ ಯುವ ಸಪ್ತಾಹ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.

ಯುವಕರು ಮನಸ್ಸು ಮಾಡಿದರೆ ಏನು ಮಾಡಬಹುದು ಎಂಬುದ್ದನ್ನು ಸ್ವಾಮಿ ವಿವೇಕಾನಂದರು ತೋರಿಸಿದ್ದರು ಎಂದು ತಿಳಿಸಿದರು.

ಮನ್ನಳ್ಳಿಯ ಜ್ಞಾನ ಜ್ಯೋತಿ ಭವನದ ಸಂಚಾಲಕಿ ಬ್ರಹ್ಮಕುಮಾರಿ ಮೀನಾ ಬಹೆನ್‍ಜಿ ಮಾತನಾಡಿ, ವಿವೇಕಾನಂದರ ಬದುಕು ಯುವಕರಿಗೆ ದಾರಿದೀಪವಾಗಿದೆ ಎಂದು ಹೇಳಿದರು.

ಸಂಪನ್ಮೂಲ ವ್ಯಕ್ತಿಗಳಾಗಿದ್ದ ಬೀದರ್‌ನ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯ ಪಾವನಧಾಮದ ಬ್ರಹ್ಮಕುಮಾರಿ ಗುರುದೇವಿ ಬಹೆನ್‍ಜಿ ಮಾತನಾಡಿ, ಭಾರತದ ವೈಶಿಷ್ಟ್ಯಗಳನ್ನು ಜಗತ್ತಿಗೆ ಮೊಟ್ಟ ಮೊದಲ ಬಾರಿಗೆ ಪರಿಚಯಿಸಿದ ಶ್ರೇಯ ಸ್ವಾಮಿ ವಿವೇಕಾನಂದರಿಗೆ ಸಲ್ಲುತ್ತದೆ. ಯುವಕರು ಸಕಾರಾತ್ಮಕ ಚಿಂತನೆಗಳನ್ನು ಮೈಗೂಡಿಸಿಕೊಳ್ಳಬೇಕು. ವಿವೇಕಾನಂದರಂತೆ ಆಗಲು ಪ್ರಯತ್ನಿಸಬೇಕು ಎಂದು ತಿಳಿಸಿದರು.

ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯ ಪ್ರೊ. ವಿನಾಯಕ ಕೊತಮಿರ ಮಾತನಾಡಿ, ಯುವಕರು ಸ್ವಾಮಿ ವಿವೇಕಾನಂದ ಹಾಗೂ ಸುಭಾಷ್ ಚಂದ್ರ ಬೋಸ್ ಅವರಿಂದ ಸಾಧನೆಗೆ ಪ್ರೇರಣೆ ಪಡೆಯಬೇಕು ಎಂದು ಹೇಳಿದರು.

ವಿದ್ಯಾರ್ಥಿಗಳಾದ ನಾಗಮಣಿ, ವೈಷ್ಣವಿ, ಮಾರ್ಟಿನ್ ಅವರು ಸ್ವಾಮಿ ವಿವೇಕಾನಂದರ ಕುರಿತು ಮಾತನಾಡಿದರು.
ಎನ್‍ಎಸ್‍ಎಸ್ ಅಧಿಕಾರಿ ಡಾ. ಹೇಮಾವತಿ ಪಾಟೀಲ, ಸೈಯದ್ ಮಕದುಮ್ ಅಹಮ್ಮದ್, ಸತ್ಯಶೀಲ, ಅಯೂಬ್ ಅಹಮ್ಮದ್, ಮಹಮ್ಮದ್ ಮುಸ್ತಫಾ ಇದ್ದರು.

ಇತಿಹಾಸ ವಿಭಾಗದ ಮುಖ್ಯಸ್ಥ ಡಾ.ಸಂಜೀವಕುಮಾರ ತಾಂದಳೆ ಸ್ವಾಗತಿಸಿದರು. ಸಾಂಸ್ಕೃತಿಕ ಸಮಿತಿ ಸಂಯೋಜಕ ಪ್ರೊ. ಮಹೇಶಕುಮಾರ ಆರ್. ನಿರೂಪಿಸಿದರು. ದೈಹಿಕ ಶಿಕ್ಷಣ ನಿರ್ದೇಶಕಿ ಊರ್ವಶಿ ಕೋಡ್ಲಿ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT