ಮಂಗಳವಾರ, ಜೂನ್ 28, 2022
21 °C

ಬೀದರ್ ತಾಲ್ಲೂಕು: ಶೇ 50 ರಷ್ಟು ಸೋಯಾ ಬಿತ್ತನೆ ಸಾಧ್ಯತೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಜನವಾಡ: ಮುಂಗಾರು ಹಂಗಾಮಿನಲ್ಲಿ ಬೀದರ್ ತಾಲ್ಲೂಕಿನ ಒಟ್ಟು ಬಿತ್ತನೆ ಕ್ಷೇತ್ರದ ಪೈಕಿ ಶೇ 50 ರಷ್ಟು ಪ್ರದೇಶದಲ್ಲಿ ಸೋಯಾ ಅವರೆ ಬಿತ್ತನೆಯಾಗುವ ಸಾಧ್ಯತೆ ಇದೆ.

ತಾಲ್ಲೂಕಿನ ಒಟ್ಟು ಬಿತ್ತನೆ ಕ್ಷೇತ್ರ 49,800 ಹೆಕ್ಟೇರ್ ಆಗಿದ್ದರೆ, ಈ ಪೈಕಿ 25,000 ಹೆಕ್ಟೇರ್ ಪ್ರದೇಶದಲ್ಲಿ ಸೋಯಾ ಅವರೆ ಬಿತ್ತನೆ ಗುರಿ ಇದೆ.

ಉಳಿದಂತೆ ತಾಲ್ಲೂಕಿನಲ್ಲಿ 11 ಸಾವಿರ ಹೆಕ್ಟೇರ್ ತೊಗರಿ, 3,500 ಹೆಕ್ಟೇರ್ ಹೆಸರು, 3,100 ಹೆಕ್ಟೇರ್ ಉದ್ದು, 1,500 ಹೆಕ್ಟೇರ್ ಹೈಬ್ರಿಡ್ ಜೋಳ ಬಿತ್ತನೆ ಗುರಿ ಹೊಂದಲಾಗಿದೆ ಎಂದು ಬೀದರ್ ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕ ಧೂಳಪ್ಪ ಹೊಸಾಳೆ ತಿಳಿಸಿದ್ದಾರೆ.

ತಾಲ್ಲೂಕಿನ 6 ರೈತ ಸಂಪರ್ಕ ಕೇಂದ್ರ ಹಾಗೂ 19 ಉಪ ಕೇಂದ್ರಗಳಲ್ಲಿ ಸೋಯಾಬೀನ್, ಉದ್ದು, ಹೆಸರು, ತೊಗರಿ, ಜೋಳ, ಮೆಕ್ಕೆಜೋಳ ಬೀಜ ವಿತರಣೆಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಹೇಳಿದ್ದಾರೆ.

ಈಗಾಗಲೇ 13,000 ಕ್ವಿಂಟಲ್ ಸೋಯಾ ಅವರೆ ಹಾಗೂ ಇತರ ಬಿತ್ತನೆ ಬೀಜಗಳ ದಾಸ್ತಾನು ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ರೈತರು ಕೃಷಿ ಇಲಾಖೆಯ ಸೌಲಭ್ಯ ಪಡೆಯಲು ಎಫ್‍ಐಡಿ (ರೈತರ ಗುರುತಿನ ಸಂಖ್ಯೆ) ಅವಶ್ಯಕವಾಗಿದೆ. ಒಂದು ವೇಳೆ ಎಫ್‍ಐಡಿ ರಚನೆಯಾಗದಿದ್ದಲ್ಲಿ ರೈತರು ಮೇ 30 ರ ಒಳಗೆ ಪಹಣಿ, ಹೋಲ್ಡಿಂಗ್, ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಬುಕ್, ಜಾತಿ ಪ್ರಮಾಣ ಪತ್ರ ಸೇರಿದಂತೆ ಅಗತ್ಯ ದಾಖಲೆಗಳೊಂದಿಗೆ ರೈತ ಸಂಪರ್ಕ ಕೇಂದ್ರಗಳಿಗೆ ಭೇಟಿ ನೀಡಿ ಎಫ್‍ಐಡಿ ರಚನೆ ಮಾಡಿಕೊಳ್ಳಬೇಕು. ಆರ್‍ಡಿ ಸಂಖ್ಯೆ ತಿದ್ದುಪಡಿ ಇರುವ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ರೈತರು ಕೂಡಲೇ ಸಂಬಂಧಪಟ್ಟ ತಹಶೀಲ್ದಾರರಿಂದ ಹೊಸ ಆರ್‍ಡಿ ಸಂಖ್ಯೆ ತೆಗೆದುಕೊಂಡು ಕೃಷಿ ಇಲಾಖೆಯ ಸೌಲಭ್ಯ ಪಡೆಯಬೇಕು ಎಂದು ಮನವಿ ಮಾಡಿದ್ದಾರೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.