ಬೀದರ್: ‘ಮುಂಬರುವ ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸಿ ತರಬೇಕು’ ಎಂದು ವಿಧಾನ ಪರಿಷತ್ ಸದಸ್ಯ ಎನ್. ರವಿಕುಮಾರ್ ಪಕ್ಷದ ಕಾರ್ಯಕರ್ತರಿಗೆ ಹೇಳಿದರು.

ನಗರದ ಪಕ್ಷದ ಕಚೇರಿಯಲ್ಲಿ ಶನಿವಾರ ನಡೆದ ಚುನಾವಣಾ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ‘ಚುನಾವಣೆಗೆ ಈಗಿನಿಂದಲೇ ಸಿದ್ಧತೆ ಮಾಡಿಕೊಳ್ಳಬೇಕು. ಗೆಲುವಿಗೆ ಬೇಕಾದ ತಯಾರಿ ಮಾಡಿಕೊಳ್ಳಬೇಕು’ ಎಂದು ಸಲಹೆ ನೀಡಿದರು.

ವಿಧಾನ ಪರಿಷತ್ ಸದಸ್ಯ ಶಶೀಲ್ ನಮೋಶಿ ಮಾತನಾಡಿ, ಅರ್ಹ ಶಿಕ್ಷಕರನ್ನು ಗುರುತಿಸಿ ಅವರ ನೋಂದಣಿಯನ್ನು ಮಾಡಿಸಬೇಕೆಂದು ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ಪಕ್ಷದ ಜಿಲ್ಲಾಧ್ಯಕ್ಷ ಸೋಮನಾಥ ಪಾಟೀಲ ಮಾತನಾಡಿ, ಬೀದರ್ ಜಿಲ್ಲೆಯ ಎಲ್ಲಾ ನಗರ ಹಾಗೂ ಗ್ರಾಮಾಂತರ ಮಂಡಲಗಳ ಪದಾಧಿಕಾರಿಗಳನ್ನು ನಿಯೋಜಿಸಲಾಗುವುದು. ಪ್ರಭಾರಿಗಳು ತಮ್ಮ ಕ್ಷೇತ್ರದಲ್ಲಿ ಶ್ರಮಿಸಬೇಕು. ಅಭ್ಯರ್ಥಿ ಶಶೀಲ್ ನಮೋಶಿಯವರನ್ನು ಪ್ರಚಂಡ ಬಹುಮತದಿಂದ ಗೆಲ್ಲಿಸಿ ತರಬೇಕೆಂದು ಕಾರ್ಯಕರ್ತರಿಗೆ ಸೂಚಿಸಿದರು.

ಶಾಸಕರಾದ ಡಾ. ಸಿದ್ದಲಿಂಗಪ್ಪ ಪಾಟೀಲ, ಎಮ್.ಜಿ. ಮುಳೆ, ಮುಖಂಡರಾದ ಪ್ರಕಾಶ್ ಖಂಡ್ರೆ, ರಘುನಾಥರಾವ್ ಮಲ್ಕಾಪುರೆ, ಪಕ್ಷದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಾಧವರಾವ ಹೊಸೂರೆ, ಪೀರಪ್ಪ ಔರಾದೆ, ಜಿಲ್ಲಾ ಉಪಾಧ್ಯಕ್ಷ ವಿಜಯಕುಮಾರ ಪಾಟೀಲ ಗಾದಗಿ, ಜಿಲ್ಲಾ ಮಾಧ್ಯಮ ಘಟಕದ ಸಂಚಾಲಕ ಶ್ರೀನಿವಾಸ ಚೌಧರಿ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260503-33-106713785

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.