ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಜ್ಞಾನ ಜಾಗೃತಿಗೆ ತಾಲ್ಲೂಕು, ಹೋಬಳಿ ಮಟ್ಟದಲ್ಲೂ ಸಮಿತಿ

ರಾಜ್ಯ ವಿಜ್ಞಾನ ಪರಿಷತ್ ಅಧ್ಯಕ್ಷ ಗಿರೀಶ ಕಡ್ಲೆವಾಡ ಘೋಷಣೆ
Last Updated 7 ಮಾರ್ಚ್ 2020, 14:19 IST
ಅಕ್ಷರ ಗಾತ್ರ

ಬೀದರ್: ‘ವಿಜ್ಞಾನ ಜಾಗೃತಿಗೆ ಪ್ರತಿ ತಾಲ್ಲೂಕು ಹಾಗೂ ಹೋಬಳಿ ಮಟ್ಟದಲ್ಲೂ ಸಮಿತಿ ರಚಿಸಲಾಗುವುದು’ ಎಂದು ರಾಜ್ಯ ವಿಜ್ಞಾನ ಪರಿಷತ್ ನೂತನ ಅಧ್ಯಕ್ಷ ಗಿರೀಶ ಕಡ್ಲೆವಾಡ ತಿಳಿಸಿದರು.

ಬಸವ ತತ್ವ ಶಿಕ್ಷಣ ಸಂಸ್ಥೆಯ ಶ್ರೀಮತಿ ಲಕ್ಷ್ಮೀಬಾಯಿ ಕಮಠಾಣೆ ಬಿ.ಇಡಿ ಕಾಲೇಜು ಸಹಯೋಗದಲ್ಲಿ ಇಲ್ಲಿಯ ವಿದ್ಯಾನಗರ ಕಾಲೊನಿಯಲ್ಲಿ ಇರುವ ವಿ.ಕೆ. ಇಂಟರ್‌ನ್ಯಾಷನಲ್‍ ಶಾಲೆಯಲ್ಲಿ ಶನಿವಾರ ಆಯೋಜಿಸಿದ್ದ ಸಮಾರಂಭದಲ್ಲಿ ಅವರು ಮಾತನಾಡಿದರು.

‘ಮೂಢನಂಬಿಕೆಗಳನ್ನು ಹೋಗಲಾಡಿಸುವ ದಿಸೆಯಲ್ಲಿ ರಾಜ್ಯದಲ್ಲಿ ವೈಜ್ಞಾನಿಕ ಕ್ರಾಂತಿಯೇ ಆಗಬೇಕಿದೆ. ಪರಿಷತ್ತು ಈ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸಲಿದೆ. ಪ್ರತಿ ಶಾಲೆ–ಕಾಲೇಜುಗಳಿಗೆ ಬಾಲ ವಿಜ್ಞಾನ ಪುಸ್ತಕ ತಲುಪಿಸಲಾಗುವುದು. ಹೆಚ್ಚು ಹೆಚ್ಚು ಕಾರ್ಯಕ್ರಮಗಳನ್ನು ನಡೆಸುವ ಮೂಲಕ ಸಾರ್ವಜನಿಕರಲ್ಲಿ ವೈಜ್ಞಾನಿಕ ಮನೋಭಾವ ಬೆಳೆಸಲಾಗುವುದು. ಬೀದರ್ ಜಿಲ್ಲೆಯ ಸದಸ್ಯರ ಸಹಕಾರದಿಂದ ನಾನು ರಾಜ್ಯ ಘಟಕದ ಅಧ್ಯಕ್ಷನಾಗಲು ಸಾಧ್ಯವಾಗಿದೆ. ಹೀಗಾಗಿ, ಪರಿಷತ್ತಿನ ಕಾರ್ಯಕ್ರಮಗಳಲ್ಲಿ ಬೀದರ್‌ಗೆ ವಿಶೇಷ ಒತ್ತು ನೀಡಲಾಗುವುದು’ ಎಂದು ತಿಳಿಸಿದರು.

‘ರಾಜ್ಯ ವಿಜ್ಞಾನ ಪರಿಷತ್ತನ ಸದಸ್ಯ ಪ್ರಕಾಶ ಲಕ್ಕಶೆಟ್ಟಿ ಮಾತನಾಡಿ, ‘ಕನ್ನಡ ಸಾಹಿತ್ಯ ಪರಿಷತ್ ಮಾದರಿಯಲ್ಲಿ ರಾಜ್ಯ ವಿಜ್ಞಾನ ಪರಿಷತ್ತಿನಿಂದಲೂ ಪ್ರತಿ ಜಿಲ್ಲೆಗಳಲ್ಲಿ ವಿಜ್ಞಾನ ಸಮ್ಮೇಳನ ಆಯೋಜಿಸಬೇಕು. ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ಆಗಿರುವ ಹೊಸ ಹೊಸ ಅವಿಷ್ಕಾರಗಳ ಬಗ್ಗೆ ಜನಸಾಮಾನ್ಯರಲ್ಲಿ ಅರಿವು ಮೂಡಿಸಬೇಕು. ವಿದ್ಯಾರ್ಥಿಗಳು ಹಾಗೂ ಶಿಕ್ಷಕರಿಗೆ ವಿಜ್ಞಾನಿಗಳೊಂದಿಗೆ ನೇರ ಸಂವಾದ ಕಾರ್ಯಕ್ರಮ ಸಂಘಟಿಸಬೇಕು. ವಿಜ್ಞಾನ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದವರಿಗೆ ಪ್ರೋತ್ಸಾಹಿಸಲು ಪ್ರೋತ್ಸಾಹ ಮತ್ತು ಸಲಹಾ ಮಂಡಳಿ ರಚಿಸಬೇಕು’ ಎಂದು ಸಲಹೆ ನೀಡಿದರು.

ಇದಕ್ಕೆ ಸ್ಪಂದಿಸಿದ ಕಡ್ಲೆವಾಡ ಅವರು ಬರುವ ದಿನಗಳಲ್ಲಿ ಈ ದಿಸೆಯಲ್ಲಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಮತ್ತೊಬ್ಬ ಸದಸ್ಯ ಮಹಾರುದ್ರಪ್ಪ ಆಣದೂರೆ ಮಾತನಾಡಿ, ‘ಕಲಬುರ್ಗಿಯಲ್ಲಿ ರಾಜ್ಯ ವಿಜ್ಞಾನ ಪರಿಷತ್ತಿನ ವಿಭಾಗೀಯ ಕಚೇರಿ ಆರಂಭಿಸಬೇಕು’ ಎಂದು ಕೋರಿದರು.

ರಾಜ್ಯ ವಿಜ್ಞಾನ ಪರಿಷತ್ತಿನ ಚುನಾವಣೆಯಲ್ಲಿ ಆಯ್ಕೆಯಾದ ಗಿರೀಶ ಬಿ. ಕಡ್ಲೆವಾಡ, ಪ್ರಕಾಶ ಲಕ್ಕಶೆಟ್ಟಿ, ಮಹಾರುದ್ರಪ್ಪ ಆಣದೂರೆ ಹಾಗೂ ದಾನಿ ಬಾಬುರಾವ್ ಅವರಿಗೆ ವಿಜ್ಞಾನ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಬಸವ ತತ್ವ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ವೈಜನಾಥ ಕಮಠಾಣೆ ಅಧ್ಯಕ್ಷತೆ ವಹಿಸಿದ್ದರು. ಸಂಸ್ಥೆಯ ಕಟ್ಟಡ ದಾನಿ ಲಕ್ಷ್ಮೀಬಾಯಿ ಕಮಠಾಣೆ, ಕಾರ್ಯದರ್ಶಿ ಡಾ.ದಿಲೀಪ ಕಮಠಾಣೆ, ರಾಜ್ಯ ವಿಜ್ಞಾನ ಪರಿಷತ್ ಕಾರ್ಯಕಾರಿ ಸಮಿತಿಯ ನಿಕಟಪೂರ್ವ ಸದಸ್ಯ ಜಗನ್ನಾಥ ಹಲ್ಮಡಗೆ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಘಟಕದ ನಿಕಟಪೂರ್ವ ಅಧ್ಯಕ್ಷ ವೆಂಕಟರೆಡ್ಡಿ ಕೋಪಗೀರ, ಪ್ರಾಚಾರ್ಯ ನಾಗೇಶ ಬಿರಾದಾರ, ಉಪನ್ಯಾಸಕ ವೀರೇಂದ್ರ ಜಿಂದೆ, ಪ್ರಿಯಂಕಾ ಕುಲಕರ್ಣಿ, ಕವಿತಾ ಬಿರಾದಾರ, ಜಗದೀಶ ಹಿಬಾರೆ, ಪ್ರೌಢಶಾಲೆ ಮುಖ್ಯಶಿಕ್ಷಕ ರವೀಂದ್ರ, ಸಹಶಿಕ್ಷಕಿ ಪ್ರಿಯಂಕಾ ಕುದರೆ, ಪ್ರೀತಿ ಇದ್ದರು.

ಉಪನ್ಯಾಸಕ ಮಹಮ್ಮದ್ ಯುನೂಸ್ ನಿರೂಪಿಸಿದರು. ಲಕ್ಷ್ಮೀಬಾಯಿ ಕಮಠಾಣೆ ಬಿ.ಇಡಿ ಕಾಲೇಜು ಪ್ರಾಚಾರ್ಯ ಧನರಾಜ ಪಾಟೀಲ ಸ್ವಾಗತಿಸಿದರು, ಬಸವ ತತ್ವ ಎಜುಕೇಶನ್ ಟ್ರಸ್ಟ್ ಆಡಳಿತಾಧಿಕಾರಿ ಶಿವಲೀಲಾ ಟೊಣ್ಣೆ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT