ಮಂಗಳವಾರ, 10 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಬೀದರ್ | ಹರ್ ಘರ್ ತಿರಂಗಾ ಯಾತ್ರೆಯಲ್ಲಿ ಹೆಜ್ಜೆ ಹಾಕಿದ ನೂರಾರು ಜನ

Published 14 ಆಗಸ್ಟ್ 2024, 2:47 IST
Last Updated 14 ಆಗಸ್ಟ್ 2024, 2:47 IST
ಅಕ್ಷರ ಗಾತ್ರ

ಬೀದರ್: ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಜಿಲ್ಲಾಡಳಿತದಿಂದ ನಗರದಲ್ಲಿ ಬುಧವಾರ ಬೆಳಿಗ್ಗೆ ಏರ್ಪಡಿಸಿದ್ದ ಹರ್ ಘರ್ ತಿರಂಗಾ ಯಾತ್ರೆಯಲ್ಲಿ ನೂರಾರು ಜ‌ನ ಉತ್ಸಾಹದಿಂದ ಹೆಜ್ಜೆ ಹಾಕಿದರು..

ನಗರದ ಬಹಮನಿ ಕೋಟೆಯೊಳಗಿನಿಂದ ಆರಂಭಗೊಂಡ ಯಾತ್ರೆ ಮಹಮೂದ್ ಗಾವಾನ್ ಮದರಸಾ, ಹಳೆ ತರಕಾರಿ ಮಾರುಕಟ್ಟೆ, ಶಹಾಗಂಜ್, ಡಾ. ಬಿ.ಆರ್. ಅಂಬೇಡ್ಕರ್ ವೃತ್ತದ ಮೂಲಕ ಹಾದು ನೆಹರೂ ಕ್ರೀಡಾಂಗಣದಲ್ಲಿ ಕೊನೆಗೊಂಡಿತು.

ಜಿಲ್ಲಾಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ ಶ್ವೇತವರ್ಣದ ಉಡುಪು ಧರಿಸಿ ಪಾಲ್ಗೊಂಡಿದ್ದರು. ಶಾಲಾ ಕಾಲೇಜಿನ ವಿದ್ಯಾರ್ಥಿಗಳು ಕೇಸರಿ, ಬಿಳಿ ಹಾಗೂ ಹಸಿರು ವರ್ಣದ ವಸ್ತ್ರ ಧರಿಸಿ ಗಮನ ಸೆಳೆದರು. ಯಾತ್ರೆಯಲ್ಲಿ ರಾಷ್ಟ್ರಭಕ್ತಿ ಗೀತೆ ಹಾಕಲಾಗಿತ್ತು. ತ್ರಿವರ್ಣ ಧ್ವಜಗಳನ್ನು ಹಿಡಿದುಕೊಂಡು ಜಯಘೋಷ ಹಾಕುತ್ತ ಮುನ್ನಡೆದರು.

ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಗಿರೀಶ್ ಬದೋಲೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ, ಹೆಚ್ಚುವರಿ ಜಿಲ್ಲಾಧಿಕಾರಿ ಶಿವಕುಮಾರ ಶೀಲವಂತ, ಹೆಚ್ಚುವರಿ ಎಸ್ಪಿ ಮಹೇಶ ಮೇಘಣ್ಣನವರ, ಡಿಸಿಎಫ್ ವಾನತಿ ಎಂ.ಎಂ., ಬೀದರ್ ದಕ್ಷಿಣ ಕ್ಷೇತ್ರದ ಶಾಸಕ ಡಾ. ಶೈಲೇಂದ್ರ ಕೆ. ಬೆಲ್ದಾಳೆ ಸೇರಿದಂತೆ ವಿವಿಧ ಸ್ವಯಂ ಸೇವಾ ಸಂಸ್ಥೆಗಳ ಅಧ್ಯಕ್ಷರು, ಪದಾಧಿಕಾರಿಗಳು ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT