ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿದ್ಯಾರ್ಥಿಗಳ ಶುಲ್ಕ ಮನ್ನಾಕ್ಕೆ ಆಗ್ರಹ

Last Updated 9 ಜುಲೈ 2020, 12:25 IST
ಅಕ್ಷರ ಗಾತ್ರ

ಬೀದರ್: ಪ್ರಸಕ್ತ ವರ್ಷ ಸರ್ಕಾರ ವಿದ್ಯಾರ್ಥಿಗಳ ಆರು ತಿಂಗಳ ಎಲ್ಲ ಶೈಕ್ಷಣಿಕ ಶುಲ್ಕಗಳನ್ನು ಮನ್ನಾ ಮಾಡಬೇಕು ಎಂದು ಭಾರತ ವಿದ್ಯಾರ್ಥಿ ಫೆಡರೇಷನ್ ಒತ್ತಾಯಿಸಿದೆ.

ಫೆಡರೇಷನ್ ಜಿಲ್ಲಾ ಘಟಕದ ಅಧ್ಯಕ್ಷ ಅರುಣ ಕೋಡಗೆ, ಉಪಾಧ್ಯಕ್ಷ ಅಮರ ಗಾದಗಿ ಹಾಗೂ ಕಾರ್ಯದರ್ಶಿ ಅವಿನಾಶ ಪಾಟೀಲ ಈ ಕುರಿತು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಮನವಿ ಪತ್ರ ಸಲ್ಲಿಸಿದ್ದಾರೆ.

ಕೋವಿಡ್ –19 ಪ್ರಯುಕ್ತ ಪಾಲಕರು ತೊಂದರೆಯಲ್ಲಿ ಇದ್ದಾರೆ. ಅಭಿವೃದ್ಧಿ ಶುಲ್ಕ, ಪ್ರವೇಶ ಶುಲ್ಕದ ಹೆಸರಲ್ಲಿ ಶೋಷಣೆ ಮಾಡಬಾರದು. 6 ತಿಂಗಳ ಕಾಲ ವಿದ್ಯಾರ್ಥಿಗಳ ಕುಟುಂಬಕ್ಕೆ ಪ್ರತಿ ತಿಂಗಳು ತಲಾ ₹7,500 ಸಹಾಯಧನ ಒದಗಿಸಬೇಕು. ಕೊರೊನಾ ಸೋಂಕು ವೇಗವಾಗಿ ಹರಡುತ್ತಿರುವುದರಿಂದ ಸ್ನಾತಕ, ಸ್ನಾತಕೋತ್ತರ, ಕಾನೂನು, ಡಿಪ್ಲೊಮಾ ಹಾಗೂ ಎಂಜಿನಿಯರಿಂಗ್ ಪರೀಕ್ಷೆಗಳನ್ನು ರದ್ದುಪಡಿಸಬೇಕು. ಆನ್‍ಲೈನ್ ಶಿಕ್ಷಣ ಕಡ್ಡಾಯಗೊಳಿಸಬಾರದು. 12ನೇ ತರಗತಿವರೆಗಿನ ಎಲ್ಲ ವಿದ್ಯಾರ್ಥಿಗಳಿಗೆ ಮಧ್ಯಾಹ್ನ ಬಿಸಿಯೂಟ ಕಲ್ಪಿಸಬೇಕು. ಫೆಲೋಶಿಪ್ ಕೂಡಲೇ ಕೊಡಬೇಕು. ಪದವಿ ಕಾಲೇಜುಗಳ ಸ್ಥಳಾಂತರ ನಿಲ್ಲಿಸಬೇಕು ಎಂದು ಆಗ್ರಹಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT