ಬೀದರ್: ದಿನದಿಂದ ದಿನಕ್ಕೆ ಬಿಸಿಲಿನ ತಾಪ ಹೆಚ್ಚುತ್ತಿದ್ದು, ನಗರದ ಟ್ರಾಫಿಕ್ ಸಿಗ್ನಲ್ಗಳಲ್ಲಿ ನೆರಳಿನ ಪರದೆ ವ್ಯವಸ್ಥೆ ಮಾಡಬೇಕು ಎಂದು ಕರ್ನಾಟಕ ಯುವ ಸಂಘ ಸಂಸ್ಥೆಗಳ ಒಕ್ಕೂಟ ಆಗ್ರಹಿಸಿದೆ.

ಈ ಸಂಬಂಧ ಒಕ್ಕೂಟದ ಪದಾಧಿಕಾರಿಗಳು ನಗರದಲ್ಲಿ ಗುರುವಾರ ಮಹಾನಗರ ಪಾಲಿಕೆ ಆಯುಕ್ತ ಮುಕುಲ್ ಜೈನ್ ಅವರಿಗೆ ಮನವಿ ಸಲ್ಲಿಸಿ ಒತ್ತಾಯಿಸಿದರು.

ಪ್ರಖರ ಬಿಸಿಲಿನಿಂದ ರಸ್ತೆಯಲ್ಲಿ ಓಡಾಡುವ ಸಾರ್ವಜನಿಕರಿಗೆ ತೊಂದರೆ ಉಂಟಾಗುತ್ತಿದೆ. ವಿಶೇಷವಾಗಿ ಟ್ರಾಫಿಕ್ ಸಿಗ್ನಲ್ಗಳಲ್ಲಿ ನಿಲ್ಲಬೇಕಾಗುವ ದ್ವಿಚಕ್ರ ವಾಹನ ಸವಾರರು ಉರಿ ಬಿಸಿಲಲ್ಲಿ ನಿಂತುಕೊಳ್ಳುವುದು ಬಹಳ ಕಷ್ಟಕರವಾಗಿದೆ. ಮುಂದಿನ ದಿನಗಳಲ್ಲಿ ಬಿಸಿಲಿನ ತಾಪ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ಇಂಥ ಸಂದರ್ಭದಲ್ಲಿ ಜನರು ಮನೆಯಿಂದ ಹೊರ ಬಂದರೆ ಟ್ರಾಫಿಕ್ ಸಿಗ್ನಲ್ ಬಳಿ ನಿಲ್ಲುವಾಗ ಬಿಸಿಲಿನ ತಾಪ ಸಹಿಸಲು ಆಗದ ಪರಿಸ್ಥಿತಿ ಎದುರಾಗುತ್ತಿದೆ. ಆದ ಕಾರಣ ಕೂಡಲೇ ನೆರಳಿಗೆ ವ್ಯವಸ್ಥೆ ಮಾಡಬೇಕು ಎಂದು ಆಗ್ರಹಿಸಿದರು.

ಒಕ್ಕೂಟದ ಜಿಲ್ಲಾಧ್ಯಕ್ಷ ಸುನೀಲ ಭಾವಿಕಟ್ಟಿ, ಮುಖಂಡರಾದ ಬಾಬುರಾವ್ ಕುಂಬಾರ, ಗಣಪತಿ ಶಂಕ್ರಪ್ಪನೋರ್, ಚಂದ್ರಕಾಂತ ಹಳ್ಳಿಖೇಡಕರ್, ಶರಣಬಸವ ಕೆ. ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260404-33-657862849

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.