ಬೀದರ್: ವೇತನ ಪರಿಷ್ಕರಿಸುವುದು ಸೇರಿದಂತೆ ಇತರೆ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಕಲ್ಯಾಣ ಕರ್ನಾಟಕ ಸಾರಿಗೆ ನಿಗಮ ಬೀದರ್ ವಿಭಾಗದ ನೌಕರರು ಕೆಲಸ ಸ್ಥಗಿತಗೊಳಿಸಿ ಮುಷ್ಕರ ನಡೆಸುತ್ತಿರುವುದರಿಂದ ಬಸ್ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ.

ವಿವಿಧ ಕಡೆ ಪ್ರಯಾಣ ಬೆಳೆಸಲು ಬಸ್ ನಿಲ್ದಾಣಕ್ಕೆ ಬಂದಿದ್ದ ಪ್ರಯಾಣಿಕರಿಗೆ ವಿಷಯ ತಿಳಿದು ಸಮಸ್ಯೆಗೀಡಾದರು. ದೂರದ ಊರುಗಳಿಗೆ ಪ್ರಯಾಣ ಬೆಳೆಸಬೇಕಾದವರು ಮನೆ ಕಡೆಗೆ ಹಿಂತಿರುಗಿದರೆ, ಜಿಲ್ಲೆಯ ವಿವಿಧ ಭಾಗಗಳ ಪ್ರಯಾಣಿಕರು ಖಾಸಗಿ ವಾಹನಗಳಲ್ಲಿ ತೆರಳಿದರು.

ಕೇಂದ್ರ ಬಸ್ ನಿಲ್ದಾಣದ ಎದುರಿನಲ್ಲಿ ಕ್ರೂಸರ್, ಟಂಟಂ ಸೇರಿದಂತೆ ಇತರೆ ವಾಹನಗಳು ಹೆಚ್ಚಿನ ಸಂಖ್ಯೆಯಲ್ಲಿ ಸೇರಿದ್ರು, ಪ್ರಯಾಣಿಕರು ಅವುಗಳಲ್ಲಿ ಸಂಚರಿಸುತ್ತಿದ್ದಾರೆ.

ನೆರೆಯ ತೆಲಂಗಾಣ ಮತ್ತು ಮಹಾರಾಷ್ಟ್ರದ ಬಸ್ಗಳು ಎಂದಿನಂತೆ ಸಂಚರಿಸುತ್ತಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.